ಉ.ಕ. ಪರ ಕೇಂದ್ರಕ್ಕೆ ಅಸೆಂಬ್ಲಿ 7 ನಿರ್ಣಯ

Published : Dec 19, 2025, 05:55 AM IST
Karnataka winter session

ಸಾರಾಂಶ

ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ‘ಏಮ್ಸ್’ ಸಂಸ್ಥೆ ಸ್ಥಾಪಿಸಲು ಅಂತಿಮ ಅನುಮೋದನೆ ನೀಡಬೇಕು  ಸೇರಿ ಏಳು ಬೇಡಿಕೆಗಳನ್ನು ಜಾರಿ ತರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಲಾಯಿತು.

 ಸುವರ್ಣ ವಿಧಾನಸಭೆ :  ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ‘ಏಮ್ಸ್’ ಸಂಸ್ಥೆ ಸ್ಥಾಪಿಸಲು ಅಂತಿಮ ಅನುಮೋದನೆ ನೀಡಬೇಕು, ಬೆಂಗಳೂರು ನಗರ ಪ್ರದೇಶದ ಸುತ್ತಮುತ್ತ ಇರುವ ಕೇಂದ್ರದ 73 ರಾಷ್ಟ್ರೀಯ ಸಂಸ್ಥೆಗಳ ಪೈಕಿ ಕನಿಷ್ಠ 25 ಸಂಸ್ಥೆಗಳನ್ನು ಉತ್ತರ ಕರ್ನಾಟಕಕ್ಕೆ ವರ್ಗಾಯಿಸಬೇಕು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಎಂಬುದು ಸೇರಿ ಏಳು ಬೇಡಿಕೆಗಳನ್ನು ಜಾರಿ ತರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಏಳು ನಿರ್ಣಯಗಳಿಗೆ ಸದನ ಧ್ವನಿ ಮತದ ಮೂಲಕ ಅಂಗೀಕಾರ

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ ಏಳು ನಿರ್ಣಯಗಳಿಗೆ ಸದನ ಧ್ವನಿ ಮತದ ಮೂಲಕ ಅಂಗೀಕಾರ ನೀಡಿತು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಬೆಂಗಳೂರು ನಗರ ಪ್ರದೇಶದಲ್ಲಿನ 73 ರಾಷ್ಟ್ರೀಯ ಪ್ರಾಮುಖ್ಯತೆ ಸಂಸ್ಥೆಗಳ ಪೈಕಿ 25 ಸಂಸ್ಥೆಗಳನ್ನು ಉತ್ತರ ಕರ್ನಾಟಕ್ಕೆ ಸ್ಥಳಾಂತರ ಮಾಡುವುದು, ಕೃಷ್ಣಾ ಜಲವಿವಾದ ನ್ಯಾಯಾಧಿಕರಣ-2 ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸುವುದು, ಮಹಾರಾಷ್ಟ್ರದ ವಿದರ್ಭ ಅಭಿವೃದ್ಧಿಗೆ ಮಂಡಳಿಗೆ ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಆರ್ಥಿಕ ನೆರವಿನ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 5 ಸಾವಿರ ಕೋಟಿ ರು. ಆರ್ಥಿಕ ನೆರವು ನೀಡುವುದು, ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸುವುದು, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಮಂಜೂರಾತಿ ನೀಡುವುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಶೇ.50 ರಿಂದ ಶೇ.56ರಷ್ಟು ಹೆಚ್ಚಿಸಿದ ಮೀಸಲಾತಿ ಪ್ರಮಾಣದ ಅಧಿಸೂಚನೆ ಮತ್ತು ಆದೇಶಗಳನ್ನು ಭಾರತ ಸಂವಿಧಾನ ಅನುಸೂಚಿ 9ಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವ ನಿರ್ಣಯ ಮಂಡಿಸಿ ಅಂಗೀಕರಿಸಲಾಯಿತು. ಈ ನಿರ್ಣಯಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಟಾಪ್‌- ಬೇಡಿಕೆ ಪಟ್ಟಿ

- ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

1. ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ ರು. ನೆರವು

2. ಕಳಸಾ- ಬಂಡೂರಿ ಅನುಷ್ಠಾನಕ್ಕೆ ಮಂಜೂರಾತಿ ನೀಡುವುದು

3. ಪರಿಶಿಷ್ಟ, ಒಬಿಸಿ ಮೀಸಲಾತಿಯನ್ನು ಶೇ.56ಕ್ಕೆ ಹೆಚ್ಚಿಸುವುದು

4. ಕೃಷ್ಣಾ ನ್ಯಾಯಾಧಿಕರಣ-2 ಐತೀರ್ಪು ಅಧಿಸೂಚನೆ ಪ್ರಕಟ

5. ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಅಂತಿಮ ಅನುಮೋದನೆ

6. ಬೆಂಗಳೂರು ಸುತ್ತಲಿನ 25 ಕೇಂದ್ರೀಯ ಕಚೇರಿ ಉ.ಕ.ಕ್ಕೆ ವರ್ಗ

7. ರಾಜ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಎಥನಾಲ್‌ ಖರೀದಿಸುವುದು

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಪರಂ ಸಿಎಂ ಆಗಲಿ : 25ಕ್ಕೂ ಹೆಚ್ಚು ಮಠಾಧೀಶರ ಆಗ್ರಹ
ಎಸ್ಕಾಂಗಳಿಂದ ₹110 ಕೋಟಿ ಹೆಚ್ಚುವರಿ ವೆಚ್ಚ : ಸಿಎಜಿ ವರದಿ