ಎಡ ಬಿಡದೇ ಸುರಿಯುತ್ತಿರುವ ಮಳೆ : ಕಂಟ್ರೋಲ್ ರೂಮಲ್ಲಿ ಕುಳಿತು ಕರೆ ಸ್ವೀಕರಿಸಿದ ಶಿವಕುಮಾರ್‌

KannadaprabhaNewsNetwork |  
Published : Oct 16, 2024, 01:32 AM ISTUpdated : Oct 16, 2024, 04:20 AM IST
dk shivakumar

ಸಾರಾಂಶ

ಎಡ ಬಿಡದೇ ಸುರಿಯುತ್ತಿರುವ ಮಳೆಯಿಂದ ನಗರದ ವಿವಿಧ ಭಾಗದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಸ್ವತಃ ಕರೆ ಸ್ವೀಕರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.

 ಬೆಂಗಳೂರು : ನಗರದಲ್ಲಿ ಎಡ ಬಿಡದೇ ಸುರಿಯುತ್ತಿರುವ ಮಳೆಯಿಂದ ನಗರದ ವಿವಿಧ ಭಾಗದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಸ್ವತಃ ಕರೆ ಸ್ವೀಕರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.

ಉಪಮುಖ್ಯಮಂತ್ರಿ ಎಲ್ಲಾ ವಲಯ ಅಧಿಕಾರಿಗಳ ಜತೆಗೆ ಆನ್‌ಲೈನ್‌ನಲ್ಲಿ ಸಭೆ ನಡೆಸಿದರು. ಮಳೆ ಅನಾಹುತ ನಿಯಂತ್ರಣ ಕ್ರಮಗಳು, ನಿಯಂತ್ರಣ ಕೊಠಡಿ ಕಾರ್ಯನಿರ್ವಹಣೆ, ಸ್ವಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು.

ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ, ತಗ್ಗು ಪ್ರದೇಶಗಳ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕಳೆದ 24 ತಾಸುಗಳಿಂದ ವಾಯುಭಾರ ಕುಸಿತ ಉಂಟಾಗಿ ಒಂದು ದಿನದಲ್ಲಿ ಬರಬೇಕಾದ ಸರಾಸರಿ ಮಳೆಗಿಂತ ಶೇ.228 ರಷ್ಟು ಮಳೆ ಹೆಚ್ಚು ಬಂದಿದೆ. ಹೀಗಾಗಿ, ಮುಂದಿನ ಮೂರು ದಿನಗಳ ಕಾಲ ನಾಗರಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು