ಕೆಫೆ ಬಾಂಬ್‌ ಬಗ್ಗೆ ಪ್ರಚೋದನಾಕಾರಿ ಹೇಳಿಕೆ : ಕೇಂದ್ರ ಸಚಿವೆ ಶೋಭಾ ವಿರುದ್ಧದ ಕೇಸ್‌ ರದ್ದು

KannadaprabhaNewsNetwork |  
Published : Sep 20, 2024, 01:38 AM ISTUpdated : Sep 20, 2024, 05:00 AM IST
Shobha Karandlaje

ಸಾರಾಂಶ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮದ್ರಾಸ್ ಹೈಕೋರ್ಟ್‌ನ ಇದೇ ರೀತಿಯ ಆದೇಶದ ಆಧಾರದ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

 ಬೆಂಗಳೂರು :  ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಪ್ರಕರಣ ಸಂಬಂಧ ಕಾಟನ್‌ಪೇಟೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಹಾಗೂ ಅದಕ್ಕೆ ಸಂಬಂಧಿಸಿದಂತೆ ನಗರದ 5ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

‘ಸಚಿವರು ನೀಡಿರುವ ಇಂತಹದೇ ಹೇಳಿಕೆ ಸಂಬಂಧ ತಮಿಳುನಾಡಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ 2024ರ ಸೆ.5ರಂದು ರದ್ದುಗೊಳಿಸಿದೆ. ಈ ಪ್ರಕರಣವೂ ಸಹ ಅದೇ ಘಟನೆಗೆ ಸಂಬಂಧಿಸಿದೆ. ಹಾಗಾಗಿ, ಮದ್ರಾಸ್‌ ಹೈಕೋರ್ಟ್‌ ಆದೇಶದ ಆಧಾರದ ಮೇಲೆ ಶೋಭಾ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲಾಗುತ್ತಿದೆ’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ಬೆಂಗಳೂರು ಪಾಲಿಕೆ ತಡೆ
ವಿಧಾನಸಭೆಯಲ್ಲಿ ಗೃಹಲಕ್ಷ್ಮೀ ಹಣ ಪಾವತಿ ಗದ್ದಲ : ಗೃಹ ಲಕ್ಷ್ಮೀ ಕ್ಷಮೆಯಾಚನೆ