2 ಕಾರ್ಯಕ್ರಮದಲ್ಲಿ ಮುಖಾಮುಖಿ ಭೇಟಿ ತಪ್ಪಿಸಿಕೊಂಡ ಸಿದ್ದು-ಡಿಕೆಶಿ

Published : Nov 27, 2025, 06:06 AM IST
DKS Siddu

ಸಾರಾಂಶ

ಅಧಿಕಾರ ಹಂಚಿಕೆ ಗುದ್ದಾಟದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ತಾವು ಭಾಗಿಯಾಗಬೇಕಾಗಿದ್ದ ಎರಡು ಕಾರ್ಯಕ್ರಮಗಳಲ್ಲಿ ಪರಸ್ಪರ ಮುಖಾಮುಖಿ ಆಗುವುದನ್ನು ತಪ್ಪಿಸಿಕೊಂಡಿದ್ದಾರೆ.

  ಬೆಂಗಳೂರು :  ಅಧಿಕಾರ ಹಂಚಿಕೆ ಗುದ್ದಾಟದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ತಾವು ಭಾಗಿಯಾಗಬೇಕಾಗಿದ್ದ ಎರಡು ಕಾರ್ಯಕ್ರಮಗಳಲ್ಲಿ ಪರಸ್ಪರ ಮುಖಾಮುಖಿ ಆಗುವುದನ್ನು ತಪ್ಪಿಸಿಕೊಂಡಿದ್ದಾರೆ.

ಡಿ.ಕೆ.ಶಿವಕುಮಾರ್ ಗೈರು

ಸಂವಿಧಾನ ದಿನಾಚರಣೆ ಅಂಗವಾಗಿ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದರು. ಆದರೆ ಡಿ.ಕೆ.ಶಿವಕುಮಾರ್ ಗೈರು ಹಾಜರಾಗಿದ್ದರು.

ಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ

ಇನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿದ್ದ ಸಿದ್ದರಾಮಯ್ಯ ಅವರು ಗೈರಾಗಿದ್ದರೆ, ಡಿ.ಕೆ.ಶಿವಕುಮಾರ್‌ ಮಾತ್ರ ಭಾಗವಹಿಸಿದ್ದರು. ಹೀಗಾಗಿ ಮುಖಾಮುಖಿ ಆಗಿ ವೇದಿಕೆ ಹಂಚಿಕೊಳ್ಳಬೇಕಾಗಿದ್ದ ನಾಯಕರು ತಪ್ಪಿಸಿಕೊಂಡಿದ್ದಾರೆ. ಇದು ಅನಿವಾರ್ಯವಾಗಿ ಆಗಿರುವುದೋ ಅಥವಾ ಉದ್ದೇಶಪೂರ್ವಕವಾಗಿ ಆಗಿರುವುದೋ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಇನ್ನು ಅಂಬೇಡ್ಕರ್‌ ಕಾರ್ಯಕ್ರಮ ಮುಗಿಸಿ ತರಾತುರಿಯಲ್ಲಿ ಸರ್ಕಾರಿ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ವಿಧಾನಸೌಧಕ್ಕೆ ತೆರಳಿದರು.

PREV
Read more Articles on

Recommended Stories

ಡಿಕೆಶಿ ಭೇಟಿಯಾದ್ರೂ ಸಿದ್ದುಗೇ ನಮ್ಮ ಬೆಂಬಲ: ಜಾರಕಿಹೊಳಿ
2028ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಸತೀಶ್‌ ಜತೆ ಚರ್ಚೆ : ಡಿಕೆ