ಸಿದ್ದರಾಮಯ್ಯ ಸಿಎಂ ಸ್ಥಾನ ವಿಚಾರ : ಸಚಿವ ಎಚ್.ಸಿ.ಮಹಾದೇವಪ್ಪ ಸ್ಪಷ್ಟನೆ

Published : Jun 16, 2025, 06:36 AM IST
HC mahadevappa

ಸಾರಾಂಶ

ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಕಲಬುರಗಿ : ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.

ಸೆಪ್ಟೆಂಬರ್ ಬಳಿಕ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಎಂಎಲ್‌ಸಿ ಎಚ್.ವಿಶ್ವನಾಥ್ ಹೇಳಿಕೆಗೆ ನಗರದಲ್ಲಿ ಭಾನುವಾರ ಪ್ರತಿಕ್ರಿಯಿಸಿ, ವಿಶ್ವನಾಥ್ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್ ಯಾವಾಗ ಆ ರೀತಿ ಹೇಳಿದ್ರೋ ಗೊತ್ತಿಲ್ಲ. ಅಂತಹ ಪ್ರಸ್ತಾವನೆ ಇಲ್ಲ. ಸದ್ಯ ಸಿಎಂ ಆಗಿ ಸಿದ್ದರಾಮಯ್ಯ ಅವರಿದ್ದು, ಅವರೇ ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಿಎಂ, ಡಿಸಿಎಂ ನೇರ ಹೊಣೆ ಎನ್ನುವ ವಿಜಯೇಂದ್ರ ಹೇಳಿಕೆ ತುಂಬಾ ಬಾಲಿಷ. ಆ ದುರಂತ ಆಗಬಾರದಿತ್ತು, ಆದರೆ ಆಗಿದೆ. ಅದಕ್ಕೆ ವಿಷಾದವಿದೆ. ದುರ್ಘಟನೆಯಲ್ಲಿನ ಲೋಪ ಕಂಡು ಹಿಡಿಯಲು ತನಿಖೆ ನಡೆಯುತ್ತಿದೆ. ಇದರಲ್ಲಿ ರಾಜಕೀಯ ಬೆರೆಸುವುದು ಮೂರ್ಖತನ. ಈ ಥರ ಘಟನೆ ಉತ್ತರ ಪ್ರದೇಶ ಸೇರಿ ಬೇರೆ ಬೇರೆ ಕಡೆ ಸಹ ನಡೆದಿವೆ. ಗುಜರಾತ್‌ನಲ್ಲಿ ವಿಮಾನ ದುರಂತ ಆಯ್ತು. ನಾವು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೇಳಿದ್ದಿವಾ?. ಇಂತದ್ದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿಗೆ ಕಿವಿಮಾತು ಹೇಳಿದರು.

PREV
Read more Articles on

Recommended Stories

ಪರಂ ನೇತೃತ್ವದಲ್ಲಿಂದು ದಲಿತರ ನಾಯಕರ ಸಭೆ
ಟ್ರಂಪ್‌ಗೆ ನೊಬೆಲ್‌ ಶಾಂತಿ ಪ್ರಶಸ್ತಿ ಕೊಡಿ : ಶ್ವೇತ ಭವನ ಕಾರ್ಯದರ್ಶಿ