;Resize=(412,232))
ಮೈಸೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಿದ್ದೇ ನಾನು ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದು ಎಸ್.ಎಂ.ಕೃಷ್ಣ ಹಾಗೂ ಅಂದಿನ ಸರ್ಕಾರ ಎಂದು ಟಾಂಗ್ ಕೊಟ್ಟಿದ್ದಾರೆ.
ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಅದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಾಗಿದ್ದರು. ಅವರ ಸರ್ಕಾರ ರಾಜಣ್ಣ ಅವರ ನೇಮಕ ಮಾಡಿತ್ತು ಎಂದಿದ್ದಾರೆ.
ರಾಜಣ್ಣ ಹಾಗೂ ಡಿಕೆಶಿ ಭೇಟಿ ಕುರಿತು ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ರಾಜಣ್ಣ, ಡಿ.ಕೆ ಶಿವಕುಮಾರ್ ಭೇಟಿ ಮಾಡಿದರೇ ತಪ್ಪೇನಿದೆ? ಡಿ.ಕೆ. ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷ. ಅವರನ್ನು ರಾಜಣ್ಣ ಭೇಟಿ ಮಾಡಬಾರದು ಎಂದು ಏನಾದರೂ ಇದೆಯೇ? ಅದರಲ್ಲಿ ಯಾವ ತಪ್ಪೂ ಇಲ್ಲ ಎಂದರು.
- ಮಾಜಿ ಸಚಿವ ಕೆ.ಎನ್.ರಾಜಣ್ಣ ಸಿದ್ದರಾಮಯ್ಯ ಅವರಿಗಷ್ಟೇ ಅಲ್ಲ ನನಗೂ ಆಪ್ತರು
- ಎಸ್.ಎಂ.ಕೃಷ್ಣ ಅವಧಿಯಲ್ಲಿ ಅವರನ್ನು ಅಪೆಕ್ಸ್ ಬ್ಯಾಂಕಿಗೆ ನೇಮಿಸಿದ್ದೇ ನಾನು
- ಬೇಕಿದ್ದರೆ ಈ ಬಗ್ಗೆ ರಾಜಣ್ಣ ಅವರನ್ನೇ ಕೇಳಿ. ನಮ್ಮಿಬ್ಬರ ನಡುವೆ ಜಗಳವೇನಿಲ್ಲ