ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ - ಕೃಷ್ಣಾ-ಭೀಮಾಗೆ 3 ಟಿಎಂಸಿ ನೀರು ಬಿಡಲು ಮನವಿ

Published : Apr 02, 2025, 07:34 AM IST
Karnataka Chief Minister Siddaramaiah (File Photo/ANI)

ಸಾರಾಂಶ

ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ  ಫಡ್ನವಿಸ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬೆಂಗಳೂರು : ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಉತ್ತರ ಕರ್ನಾಟಕ ಭಾಗದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬೇಸಿಗೆಯ ಬಿಸಿ ಹೆಚ್ಚಾದ ಕಾರಣದಿಂದಾಗಿ ಹಿಪ್ಪರಗಿ ಬ್ಯಾರೇಜ್‌ ಸೇರಿ ಇನ್ನಿತರ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತವಾಗಿದೆ. ಇದರಿಂದಾಗಿ ಕುಡಿಯುವ ನೀರು ಪೂರೈಕೆಗೆ ಬೇಕಿರುವ ನೀರಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದು ಭವಿಷ್ಯದಲ್ಲಿ ಸಮಸ್ಯೆ ಹೆಚ್ಚುವಂತಾಗಲಿದೆ.

ಈ ಹಿಂದೆಯೂ ಬೇಸಿಗೆ ಅವಧಿಯಲ್ಲಿ ಮಹಾರಾಷ್ಟ್ರ ಸರ್ಕಾರ ರಾಜ್ಯದ ನದಿಗಳಿಗೆ ನೀರು ಬಿಡುಗಡೆ ಮಾಡಿದ್ದು, ಅದಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಈಗಲೂ ಅದೇ ರೀತಿಯ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಉತ್ತರ ಕರ್ನಾಟಕದ ಭಾಗದಲ್ಲಿ ಜನರಿಗೆ ಕುಡಿಯುವ ಸಲುವಾಗಿ ವರ್ನಾ ಮತ್ತು ಕೋಯ್ನಾ ಜಲಾಶಯದಿಂದ ಕೃಷ್ಣ ನದಿಗೆ 2 ಟಿಎಂಸಿ ಹಾಗೂ ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಪತ್ರದಲ್ಲಿ ಕೋರಿದ್ದಾರೆ.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ