ಮಾ.6ಕ್ಕೆ ಸಿದ್ದು ದಾಖಲೆ ಬಜೆಟ್‌ - ಮಾ.6ರಿಂದ 27ರವರೆಗೆ ಬಜೆಟ್‌ ಕಲಾಪ

Published : Feb 13, 2026, 06:15 AM IST
Siddaramaiah

ಸಾರಾಂಶ

ರಾಜ್ಯ ವಿಧಾನಮಂಡಲ ಬಜೆಟ್‌ ಅಧಿವೇಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.  ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ

 ಬೆಂಗಳೂರು :  ರಾಜ್ಯ ವಿಧಾನಮಂಡಲ ಬಜೆಟ್‌ ಅಧಿವೇಶನವು ಮಾ.6 ರಿಂದ ಮಾ.27ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.

ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾ.6 ರಿಂದ ಮಾ.27ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ನಡೆಸಲು ನಿರ್ಧಾರ ಮಾಡಲಾಗಿದೆ.

ಅಧಿವೇಶನದ ಮೊದಲ ದಿನವಾದ ಮಾ. 6ರಂದು ಮುಖ್ಯಮಂತ್ರಿ ಹಾಗೂ ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ.

ಮಾರ್ಚ್‌ 6ರಂದು  ಬಜೆಟ್

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಮಾರ್ಚ್ 6 ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಒಟ್ಟು14 ದಿನ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್‌ 6ರಂದು ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

''ನಂಗೆ ಯಶಸ್ಸು ಸಿಕ್ಕೇ ಸಿಗುತ್ತೆ, ಸ್ವಲ್ಪ ಶ್ರಮ ಪಡಬೇಕು - ಹೈಕಮಾಂಡ್‌ ಬಳಿ ‘ಎಲ್ಲವನ್ನೂ’ ಮಾತಾಡಿದ್ದೇನೆ''
ವಿದ್ಯುತ್ ನಿಗಮಗಳ ಖಾಸಗೀಕರಣಕ್ಕೆ ನೌಕರರ ವಿರೋಧ