ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು

KannadaprabhaNewsNetwork |  
Published : Dec 15, 2025, 03:00 AM IST
ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

ಬ್ರೇಕ್‌ ಫಾಸ್ಟ್ ಮೀಟಿಂಗ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಒಗ್ಗಟ್ಟಿನ ಸಂದೇಶ ನೀಡಿದ್ದರೂ, ಬೆಂಬಲಿಗರಿಂದ ‘ಸಿಎಂ’ ಕೂಗು ಮಾತ್ರ ನಿಂತಿಲ್ಲ. ಭಾನುವಾರ ನಡೆದ ವೋಟ್‌ ಚೋರಿ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಮತ್ತು ಡಿಕೆಶಿ ದೆಹಲಿಗೆ ಬಂದಾಗಲೂ ಬೆಂಬಲಿಗರು ತಮ್ಮ ನಾಯಕನ ಪರ ಜೈಕಾರ ಕೂಗಿದ್ದಾರೆ.

- ಎರಡೂ ಬಣಗಳಿಂದ ಘೋಷಣೆಗಳ ಸಮರ- ಸುಮ್ನಿರಲು ಹೇಳಿದ್ರೂ ಕೇಳದ ಬೆಂಬಲಿಗರು

---

ಸೋನಿಯಾ, ರಾಗಾ

ಔತಣದಲ್ಲಿ ಡಿಕೆ ಭಾಗಿ

ನವದೆಹಲಿ: ವೋಟ್‌ ಚೋರಿ ವಿರುದ್ಧದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಎಐಸಿಸಿ ಕಚೇರಿಯಲ್ಲಿ ಅಧಿನಾಯಕಿ ಸೋನಿಯಾ ಗಾಂಧಿ, ಪಕ್ಷಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಜತೆ ಔತಣಕೂಟದಲ್ಲಿ ಭಾಗಿಯಾದರು. ಆ ನಾಯಕರ ಜತೆ ಕೆಲ ಹೊತ್ತು ಮಾತನಾಡಿದರು. ಸಂಜೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತನಾಡಿದರು.

--

ಕನ್ನಡಪ್ರಭ ವಾರ್ತೆ ನವದೆಹಲಿ

ಬ್ರೇಕ್‌ ಫಾಸ್ಟ್ ಮೀಟಿಂಗ್‌ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಒಗ್ಗಟ್ಟಿನ ಸಂದೇಶ ನೀಡಿದ್ದರೂ, ಬೆಂಬಲಿಗರಿಂದ ‘ಸಿಎಂ’ ಕೂಗು ಮಾತ್ರ ನಿಂತಿಲ್ಲ. ಭಾನುವಾರ ನಡೆದ ವೋಟ್‌ ಚೋರಿ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಮತ್ತು ಡಿಕೆಶಿ ದೆಹಲಿಗೆ ಬಂದಾಗಲೂ ಬೆಂಬಲಿಗರು ತಮ್ಮ ನಾಯಕನ ಪರ ಜೈಕಾರ ಕೂಗಿದ್ದಾರೆ.

ಸಮಾವೇಶದಲ್ಲಿ ಪಾಲ್ಗೊಳ್ಳಲು ಡಿ.ಕೆ.ಶಿವಕುಮಾರ್‌ ಅವರು ಸಚಿವರು, ಶಾಸಕರೊಂದಿಗೆ ಕರ್ನಾಟಕ ಭವನಕ್ಕೆ ಆಗಮಿಸಿದಾಗ ಬೆಂಬಲಿಗರು ‘ಮುಂದಿನ ಸಿಎಂ ಡಿಕೆಶಿʼ ಎಂದು ಜೈಕಾರ ಕೂಗಿದರು. ಸುಮ್ಮನಿರುವಂತೆ ಅವರು ಬೆಂಬಲಿಗರಿಗೆ ಸೂಚಿಸಿದರೂ ಬೆಂಬಲಿಗರ ಜೈಕಾರ ಮುಂದುವರಿಯಿತು.

ಸ್ವಲ್ಪ ಸಮಯದ ಬಳಿಕ, ಬೆಂಗಳೂರಿನಿಂದ ಆಗಮಿಸಿದ ಸಿದ್ದರಾಮಯ್ಯ ಕೂಡ ಕರ್ನಾಟಕ ಭವನಕ್ಕೆ ಆಗಮಿಸಿದರು. ಈ ವೇಳೆ, ಅವರ ಬೆಂಬಲಿಗರು, ‘ಐದು ವರ್ಷವೂ ಸಿದ್ದರಾಮಯ್ಯ ಸಿಎಂ’ ಎಂದು ಘೋಷಣೆ ಕೂಗಿದರು. ಆ ಮೂಲಕ ದೆಹಲಿಯ ಕರ್ನಾಟಕ ಭವನ ಕೂಡ ಭಾನುವಾರ ಸಿದ್ದು ಮತ್ತು ಡಿಕೆಶಿ ಬೆಂಬಲಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಯಿತು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ಮತಚೋರಿ ಬಗ್ಗೆ ದಿಲ್ಲೀಲಿ ಕೈ ನಾಯಕರ ರಣಕಹಳೆ