ಪೂರ್ಣಾವಧಿಗೆ ಸಿದ್ದರಾಮಯ್ಯ ಸಿಎಂ : ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್‌

KannadaprabhaNewsNetwork |  
Published : Feb 14, 2025, 12:34 AM ISTUpdated : Feb 14, 2025, 04:07 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

 ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು. ಎರಡೂವರೆ ವರ್ಷ ಅಧಿಕಾರ ಅಂತೇನು ಹೈಕಮಾಂಡ್‌ ಹೇಳಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಇಂದು ಇದೇ ವೇಳೆ ಪರಮೇಶ್ವರ್‌ ತಿಳಿಸಿದರು.

ಎಂ.ಬಿ.ಪಾಟೀಲ್‌ ಮಾತನಾಡಿ, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರೈಸಿದ ನಂತರ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆಯನ್ನೂ ಎದುರಿಸುತ್ತೇವೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ದೇವರಾಜು ಅರಸು ಅವರು ಏಳು ವರ್ಷಗಳ ಕಾಲ ಅಧಿಕಾರ ನಡೆಸಿದ್ದರು. ಸಿದ್ದರಾಮಯ್ಯ ಅವರು ಏಳು ವರ್ಷ ಅಲ್ಲ, 10 ವರ್ಷವೂ ಅಧಿಕಾರದಲ್ಲಿ ಇರುತ್ತಾರೆ ಎಂದು ಹೇಳಿದರು. ಸಚಿವ ಪರಮೇಶ್ವರ್‌ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಮಾಡಲಿ ಎಂದು ನಾನು ಹಾರೈಸುತ್ತೇನೆ. ಅವರು ಈ ಐದು ವರ್ಷ ಆಡಳಿತ ಪೂರ್ಣಗೊಳಿಸಿದರೆ ಸಹಜವಾಗಿ ಅದು ದಾಖಲೆ ಆಗಲಿದೆ. 

ಶಾಸಕರು ಸಿಎಲ್‌ಪಿ ನಾಯಕರನ್ನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದರು. ಆ ಸಂದರ್ಭದಲ್ಲಿ ಹೈಕಮಾಂಡ್‌ ಎರಡೂವರೆ ವರ್ಷ ಅಧಿಕಾರ ಅಂತೇನೂ ಹೇಳಿರಲಿಲ್ಲ. ಹಾಗಾಗಿ, ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಭಾವಿಸಿದ್ದೇವೆ ಎಂದರು.ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್‌ ತೀರ್ಮಾನ ಏನೇ ಇದ್ದರೂ ನಾವು ಒಪ್ಪಿಕೊಳ್ಳುತ್ತೇವೆ. ಎಐಸಿಸಿ ಹೊಸ ಕಚೇರಿ ಉದ್ಘಾಟನೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಪುನಾರಚನೆ ಆಗಬೇಕು ಅಂದಿದ್ದರು. ಆ ಅರ್ಥದಲ್ಲಿ ಅವರು ಹೇಳಿರಬಹುದು. ಕೆಲ ರಾಜ್ಯಗಳಲ್ಲಿ ನಮ್ಮ ಪಕ್ಷ ಸೋತಿದೆ, ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು. ಹೈಕಮಾಂಡ್ ತೀರ್ಮಾನ ಏನಿರುತ್ತದೋ ಗೊತ್ತಿಲ್ಲ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ
ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ