ಆಂಧ್ರ ರಾಜ್ಯಸಭೆ ಸೀಟಿನ ಮೇಲೆ ರಾಮುಲು ಕಣ್ಣು? ಶೀಘ್ರದಲ್ಲೇ ದೆಹಲಿಗೆ । ರಾಜ್ಯಸಭೆ ಸ್ಥಾನಕ್ಕೆ ಬೇಡಿಕೆ ಸಾಧ್ಯತೆ

Published : Feb 01, 2025, 08:19 AM IST
Sriramulu

ಸಾರಾಂಶ

ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ಜತೆಗಿನ ಲಡಾಯಿ ಕುರಿತು ವರಿಷ್ಠರ ಜತೆ ಚರ್ಚಿಸಲು ಮಾಜಿ ಸಚಿವ ಬಿ.ಶ್ರೀರಾಮುಲು ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

  ಬಳ್ಳಾರಿ : ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ಜತೆಗಿನ ಲಡಾಯಿ ಕುರಿತು ವರಿಷ್ಠರ ಜತೆ ಚರ್ಚಿಸಲು ಮಾಜಿ ಸಚಿವ ಬಿ.ಶ್ರೀರಾಮುಲು ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ವೈಎಸ್ಸಾರ್ ಕಾಂಗ್ರೆಸ್‌ನ ವಿಜಯಸಾಯಿ ರೆಡ್ಡಿ ಇತ್ತೀಚೆಗೆ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ತಮ್ಮನ್ನು ನೇಮಕ ಮಾಡುವಂತೆ ಶ್ರೀರಾಮುಲು ಅವರು ಹೈಕಮಾಂಡ್ ನಾಯಕರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸತತ ಎರಡು ಚುನಾವಣೆಗಳಲ್ಲಿ ಸೋಲುಂಡ ಶ್ರೀರಾಮುಲು ಅವರು ಸದ್ಯ ರಾಜಕೀಯ ಅಜ್ಞಾತವಾಸ ಅನುಭವಿಸುತ್ತಿದ್ದಾರೆ. ವಾಲ್ಮೀಕಿ ಸಮುದಾಯದ ವರ್ಚಸ್ವಿ ನಾಯಕ ಎನಿಸಿರುವ ಶ್ರೀರಾಮುಲು, ರಾಜ್ಯಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನ ನೀಡಿದರೆ ಪಕ್ಷ ಸಂಘಟನೆಗೆ ಅನುಕೂಲವಾಗಲಿದೆ. ಪಕ್ಷದ ಬೆಳವಣಿಗೆ ಹಿನ್ನೆಲೆಯಲ್ಲಿ ಶ್ರೀರಾಮುಲುಗೆ ಪಕ್ಷದ ಹೈಕಮಾಂಡ್ ರಾಜ್ಯಸಭಾ ಸ್ಥಾನ ನೀಡುವ ಸಾಧ್ಯತೆಯಿದೆ. ಈ ಕುರಿತು ದೆಹಲಿಗೆ ತೆರಳಿದ ವೇಳೆ ಚರ್ಚೆ ನಡೆಯಲಿದೆ ಎಂದು ಶ್ರೀರಾಮುಲು ಅವರ ಆಪ್ತ ಮೂಲಗಳು ತಿಳಿಸಿವೆ.

ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ಅಸಮಾಧಾನ ಸ್ಫೋಟದ ಬಳಿಕ ಶ್ರೀರಾಮುಲು ಅವರನ್ನು ದೆಹಲಿಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಹ್ವಾನಿಸಿದ್ದು, ಇಷ್ಟರಲ್ಲಿಯೇ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಿಎಂ ಸಿದ್ದುಗೆ ಇದು ಕೊನೆ ಅಧಿವೇಶನ: ವಿಜಯೇಂದ್ರ
ಬಿವೈವಿ ಕಲೆಕ್ಷನ್‌ ಕಿಂಗ್‌, ಕಲೆಕ್ಷನ್‌ ಬಿಚ್ಚಿಡ್ಲಾ? : ಡಿಕೆ