ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಶಿಸ್ತು ಕ್ರಮಕ್ಕೆ ಮನವಿ : ಎಸ್‌ಟಿಎಸ್‌, ಹೆಬ್ಬಾರ್‌ ಅನರ್ಹತೆಗೆ ಬಿಜೆಪಿ ಸಭೆಯಲ್ಲಿ ನಿರ್ಧಾರ

KannadaprabhaNewsNetwork |  
Published : Dec 08, 2024, 01:16 AM ISTUpdated : Dec 08, 2024, 05:16 AM IST
ಬಿಜೆಪಿ | Kannada Prabha

ಸಾರಾಂಶ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್‌ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ್ದ ಬಿಜೆಪಿ ಕೋರ್‌ ಕಮಿಟಿ ಸಭೆ ನಿರ್ಧರಿಸಿದೆ.

 ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್‌.ಟಿ.ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್‌ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ್ದ ಬಿಜೆಪಿ ಕೋರ್‌ ಕಮಿಟಿ ಸಭೆ ನಿರ್ಧರಿಸಿದೆ.

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ‘ಬಿಜೆಪಿ ಚಿಹ್ನೆಯಡಿ ಗೆದ್ದ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರು ಕಳೆದ ಹಲವು ತಿಂಗಳಿಂದ ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಜೊತೆ ಅಧಿಕೃತವಾಗಿ ಗುರುತಿಸಿಕೊಂಡಿದ್ದಾರೆ. ಈ ಇಬ್ಬರು ಶಾಸಕರ ವಿಚಾರವನ್ನು ಬಹಳ ಹಿಂದೆಯೂ ಚರ್ಚಿಸಲಾಗಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕಲು ಹಾಗೂ ಬಿಗಿ ಕ್ರಮ ಕೈಗೊಳ್ಳಲು ಕೋರ್ ಕಮಿಟಿ ಸರ್ವಾನುಮತದಿಂದ ಕೋರಿದೆ. ಈ ವಿಚಾರವನ್ನು ರಾಷ್ಟ್ರೀಯ ಅಧ್ಯಕ್ಷರ ಮತ್ತು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದು ಇತ್ಯರ್ಥಗೊಳಿಸಲು ತೀರ್ಮಾನಿಸಲಾಗಿದೆ’ ಎಂದರು.

ಹಲವು ತಿಂಗಳಿಂದ ಪಕ್ಷದ ಕೆಲ ಮುಖಂಡರ ಅಶಿಸ್ತಿನ ನಡವಳಿಕೆಗೆ ಕಡಿವಾಣ ಹಾಕಲು ಹಾಗೂ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಂತೆಯೆ ಕೋರ್‌ ಕಮಿಟಿ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.

ಯತ್ನಾಳ್‌ ಬಗ್ಗೆಯೂ ಪ್ರಸ್ತಾಪ:

ಶಾಸಕ ಬಸನಗೌಡ ಯತ್ನಾಳ್‌ ಅವರು ಈಗಾಗಲೇ ಕೇಂದ್ರದ ಶಿಸ್ತು ಸಮಿತಿ ಎದುರು ಹಾಜರಾಗಿ ಬಂದಿದ್ದಾರೆ. ಈಗ ಬಾಲ್‌ ವರಿಷ್ಠರ ಅಂಗಳದಲ್ಲಿದೆ. ಯಾರೂ ಶಿಸ್ತು ಮೀರುವಂತಿಲ್ಲ. ಈ ಹಿಂದಿನ ಘಟನೆಗಳಿಂದ ಪಕ್ಷದ ಕಾರ್ಯಕರ್ತರಿಗೆ ಬೇಸರವಾಗಿದೆ. ಪಕ್ಷದ ಬೆಳವಣಿಗೆ ದೃಷ್ಟಿಯಿಂದಲೂ ಇದು ಒಳ್ಳೆಯದಲ್ಲ. ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಬೇಕು. ಹಾದಿ-ಬೀದಿಯಲ್ಲಿ ಮಾತನಾಡುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಸಂಬಂಧ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಶಿಸ್ತು ಕ್ರಮದ ಬಗ್ಗೆ ಕೇಂದ್ರದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದರು.

ಈ ಇಬ್ಬರು ಶಾಸಕರ ವಿಚಾರವನ್ನು ಬಹಳ ಹಿಂದೆಯೂ ಚರ್ಚಿಸಲಾಗಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕಲು ಹಾಗೂ ಬಿಗಿ ಕ್ರಮ ಕೈಗೊಳ್ಳಲು ಕೋರ್ ಕಮಿಟಿ ಸರ್ವಾನುಮತದಿಂದ ಕೋರಿದೆ. ಈ ವಿಚಾರವನ್ನು ರಾಷ್ಟ್ರೀಯ ಅಧ್ಯಕ್ಷರ ಮತ್ತು ರಾಷ್ಟ್ರೀಯ ನಾಯಕರ ಗಮನಕ್ಕೆ ತಂದು ಇತ್ಯರ್ಥಗೊಳಿಸಲು ತೀರ್ಮಾನಿಸಲಾಗಿದೆ ಎಂದರು.

ಹಲವು ತಿಂಗಳಿಂದ ಪಕ್ಷದ ಕೆಲ ಮುಖಂಡರ ಅಶಿಸ್ತಿನ ನಡವಳಿಕೆಗೆ ಕಡಿವಾಣ ಹಾಕಲು ಹಾಗೂ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಂತೆಯೆ ಕೋರ್‌ ಕಮಿಟಿ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು.

ಯತ್ನಾಳ್‌ ಬಗ್ಗೆಯೂ ಪ್ರಸ್ತಾಪ:

ಶಾಸಕ ಬಸನಗೌಡ ಯತ್ನಾಳ್‌ ಅವರು ಈಗಾಗಲೇ ಕೇಂದ್ರದ ಶಿಸ್ತು ಸಮಿತಿ ಎದುರು ಹಾಜರಾಗಿ ಬಂದಿದ್ದಾರೆ. ಈಗ ಬಾಲ್‌ ವರಿಷ್ಠರ ಅಂಗಳದಲ್ಲಿದೆ. ಯಾರೂ ಶಿಸ್ತು ಮೀರುವಂತಿಲ್ಲ. ಈ ಹಿಂದಿನ ಘಟನೆಗಳಿಂದ ಪಕ್ಷದ ಕಾರ್ಯಕರ್ತರಿಗೆ ಬೇಸರವಾಗಿದೆ. ಪಕ್ಷದ ಬೆಳವಣಿಗೆ ದೃಷ್ಟಿಯಿಂದಲೂ ಇದು ಒಳ್ಳೆಯದಲ್ಲ. ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಬೇಕು. ಹಾದಿ-ಬೀದಿಯಲ್ಲಿ ಮಾತನಾಡುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವ ಸಂಬಂಧ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆಯಾಗಿದೆ. ಶಿಸ್ತು ಕ್ರಮದ ಬಗ್ಗೆ ಕೇಂದ್ರದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದರು.

ಸೋಲಿನ ಕಾರಣ ಪತ್ತೆಗಾಗಿ ಸಮಿತಿ

ಇತ್ತೀಚಿನ ಶಿಗ್ಗಾಂವಿ, ಸಂಡೂರು ಉಪಚುನಾವಣೆಯಲ್ಲಿ ಪಕ್ಷಕ್ಕೆ ಆದ ಸೋಲಿಗೆ ಕಾರಣ ತಿಳಿಯಲು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತು ಮಾಜಿ ಸಚಿವ ಎನ್‌,ಮಹೇಶ್‌ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲು ಕೋರ್‌ ಕಮಿಟಿ ನಿರ್ಧರಿಸಿದೆ. ಈ ತಂಡ ಎರಡೂ ಕ್ಷೇತ್ರಗಳಿಗೆ ತೆರಳಿ ಸೋಲಿನ ಬಗ್ಗೆ ಮಾಹಿತಿ ಕಲೆಕಲಿದೆ.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ