)
ಧಾರವಾಡ: ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯನವರು ಆ.29ರ ನಂತರ ಮುಖ್ಯಮಂತ್ರಿಗಳಾಗಿ ಇರುತ್ತಾರೋ, ಇಲ್ಲವೋ ಗೊತ್ತಿಲ್ಲ. ಇಂತಹ ಸಮಯದಲ್ಲಿ ವಿರೋಧದ ಮಧ್ಯೆಯೂ ಜಿಂದಾಲ್ ಕಂಪನಿಗೆ ಸಾವಿರಾರು ಎಕರೆ ಪರಭಾರೆ ಮಾಡುವ ಮೂಲಕ ರಾಜ್ಯ ಸರ್ಕಾರ ಇನ್ನೊಂದು ದೊಡ್ಡ ಹಗರಣಕ್ಕೆ ಕೈ ಹಾಕಿದೆ ಎಂದು ವಿಧಾನಸಭೆಯ ಉಪ ನಾಯಕ, ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.
2013ರಲ್ಲೂ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಈ ಪ್ರಸ್ತಾವನೆ ಬಂದಿತ್ತು. ಆಗ ನಾವು ಹೋರಾಟ ಮಾಡಿದ್ದೆವು. ಮುಂದೆ ಮೈತ್ರಿ ಸರ್ಕಾರದಲ್ಲೂ ಎಚ್.ಕೆ. ಪಾಟೀಲ ಸೇರಿದಂತೆ ನಾವೆಲ್ಲರೂ ವಿಧಾನಸಭೆಯಲ್ಲಿಯೇ ಮಲಗಿ ಪ್ರತಿಭಟನೆ ಮಾಡಿದ್ದೆವು. ಈಗ ಮತ್ತೆ ಹೋರಾಟ ಮಾಡುವ ಸಮಯ ಬಂದಿದೆ. ಕಾನೂನು ಹೋರಾಟ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ರಾಜ್ಯದ ಸಂಪತ್ತನ್ನು ನಾಶ ಮಾಡಲು ನಾವು ಬಿಡುವುದಿಲ್ಲ ಎಂದರು.