ಕೆಪಿಎಸ್ಸಿ ಎಸ್‌ಐಟಿ ತನಿಖೆ ವಿರುದ್ಧ ರಾಜ್ಯ ಸುಪ್ರೀಂಗೆ

Published : Sep 24, 2026, 09:56 AM IST
DK Shivakumar ON KPSC

ಸಾರಾಂಶ

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಬುಧವಾರ ಅಂತಿಮ ತೀರ್ಮಾನ ಕೈಗೊಂಡಿದೆ.

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಬುಧವಾರ ಅಂತಿಮ ತೀರ್ಮಾನ ಕೈಗೊಂಡಿದೆ.

ಗುರುವಾರ ಅಥವಾ ಶುಕ್ರವಾರ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿದ್ದು, ಈ ಕುರಿತು ಕಾನೂನು ಪರಿಣತರ ಜತೆ ಸಮಾಲೋಚಿಸಿ ಸರ್ಕಾರ ತೀರ್ಮಾನ ಮಾಡಿದೆ.

ಎರಡು ದಿನಗಳ ಹಿಂದೆ ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ರಾಜ್ಯ ಬಂದೀಖಾನೆ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಸಾರಥ್ಯದಲ್ಲಿ ಎಸ್‌ಐಟಿಯನ್ನು ರಚಿಸಿ ಹೈಕೋರ್ಟ್ ಆದೇಶಿಸಿತ್ತು. ಆದರೆ ಈಗಾಗಲೇ ರಾಜ್ಯದ ಪ್ರತಿಷ್ಠಿತ ತನಿಖಾ ಸಂಸ್ಥೆಯಾಗಿರುವ ಸಿಐಡಿಯು ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಎಸ್‌ಐಟಿ ರಚನೆ ಬಗ್ಗೆ ಸರ್ಕಾರ ಅತೃಪ್ತಿ ವ್ಯಕ್ತಪಡಿಸಿತು. ಕೊನೆಗೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಗೃಹ ಇಲಾಖೆ ಮೂಲಕ ಮೇಲ್ಮನವಿ ಸಲ್ಲಿಕೆ ಮಾಡಲು ಸರ್ಕಾರ ನಿರ್ಣಯಿಸಿದೆ ಎಂದು ಮೂಲಗಳು ಹೇಳಿವೆ.

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಕುರಿತು ಸಿಐಡಿ ಡಿಜಿಪಿ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯುತ್ತಿದೆ. ಈಗಾಗಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಗಂಗ್ವಾರ್ ಹಾಗೂ ಮಧ್ಯವರ್ತಿ, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಸೇರಿ ಇಬ್ಬರ ಬಂಧನವಾಗಿದ್ದು, ಆರೋಪಿಗಳಿಂದ ಸುಮಾರು 1.5 ಕೋಟಿ ರು.ಗಳಷ್ಟು ಹಣ ಜಪ್ತಿಯಾಗಿದೆ. ಅಲ್ಲದೆ ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷ ಶಿ‍ವಶಂಕರಪ್ಪ ಸಾಹುಕಾರ್ ಹಾಗೂ ಮಾಜಿ ಸದಸ್ಯೆ ಶಾಂತಾ ಹೊಸಮನಿ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ. ತನಿಖೆ ಪ್ರಗತಿಯಲ್ಲಿರುವಾಗ ಎಸ್‌ಐಟಿ ರಚನೆ ಔಚಿತ್ಯವಿದೆಯೇ ಎಂದು ಪ್ರಶ್ನಿಸಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ.

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!

ಕೆಪಿಎಸ್ಸಿ ಅಕ್ರಮದ ತನಿಖೆಗೆ ಎಸ್‌ಐಟಿ ರಚಿಸಿ ಹೈಕೋರ್ಟ್‌ ಹೊರಡಿಸಿದ್ದ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸುತ್ತಿರುವ ಬಗ್ಗೆ ‘ಕನ್ನಡಪ್ರಭ’ ಮಾತ್ರ ನಿನ್ನೆ ವರದಿ ಮಾಡಿತ್ತು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಮಧ್ಯಂತರ ಬರ ಪರಿಹಾರ ಕೋರಿ ಮೋದಿಗೆ ಡಿಕೆ ಪತ್ರ
ಬರ ಪರಿಹಾರಕ್ಕಾಗಿ ದಿಲ್ಲಿಗೆ ಸರ್ವಪಕ್ಷ ನಿಯೋಗ: ಡಿಕೆಶಿ