ಕನ್ನಡಪ್ರಭ ವಾರ್ತೆ ಬೆಂಗಳೂರು
ಬುಧವಾರ 1.74 ಲಕ್ಷ ಕುಟುಂಬಗಳ ಸಮೀಕ್ಷೆ ನಡೆಸಲಾಗಿದೆ. ಒಟ್ಟಾರೆ, ಸಂಜೆ 7.30ರ ಸುಮಾರಿಗೆ 5.91 ಲಕ್ಷ ಕುಟುಂಬದ ಸಮೀಕ್ಷೆ ಪೂರ್ಣಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇಂದ್ರ ನಗರ ಪಾಲಿಕೆಯಲ್ಲಿ ಈವರೆಗೆ 22,601 ಕುಟುಂಬ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರ ಪಾಲಿಕೆ 25,722, ಉತ್ತರ ನಗರ ಪಾಲಿಕೆ 41,610, ದಕ್ಷಿಣ ನಗರ ಪಾಲಿಕೆ 30,582 ಹಾಗೂ ಪಶ್ಚಿಮ ನಗರ ಪಾಲಿಕೆ 53,159 ಮನೆ ಸಮೀಕ್ಷೆ ಪೂರ್ಣಗೊಂಡಿದೆ.
ಸಮೀಕ್ಷೆಯಲ್ಲಿ ಗಣ್ಯರು ಭಾಗಿ:ಬುಧವಾರ ಸದಾಶಿವನಗರದ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಲ್ಲೇಶ್ವರದಲ್ಲಿರುವ ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಗೂ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನಿವಾಸಕ್ಕೆ ತೆರಳಿ ಗಣತಿದಾರರು ಸಮೀಕ್ಷೆ ನಡೆಸಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.