ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಜಾಹೀರಾತು: ವೈ.ಎ. ನಾರಾಯಣಸ್ವಾಮಿ

KannadaprabhaNewsNetwork |  
Published : Feb 07, 2024, 01:50 AM ISTUpdated : Feb 07, 2024, 08:48 AM IST
Y. A. Narayanaswamy

ಸಾರಾಂಶ

೬೦ ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತೆ ನಿರಂತರವಾಗಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ

ಕನ್ನಡಪ್ರಭ ವಾರ್ತೆ ಕೆಜಿಎಫ್

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ರಾಜ್ಯ ಸರ್ಕಾರ ತನ್ನ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯಿರುವ ಜಾಹೀರಾತನ್ನು ಪತ್ರಿಕೆಗಳಿಗೆ ನೀಡಿದೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.

ಆಗ್ನೇಯ ವಿಧಾನ ಪರಿಷತ್ ಚುನಾವಣಾ ಹಿನ್ನಲೆಯಲ್ಲಿ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರ ಬಳಿ ಮತ ಯಾಚನೆ ನಡೆಸಿ ಮಾತನಾಡಿ, ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ ಎಂದರು.

ಕಾಂಗ್ರೆಸ್‌ ಮುಖವಾಡ ಕಳಚುತ್ತೇವೆ: ೬೦ ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತೆ ನಿರಂತರವಾಗಿ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ, ಇದನ್ನೇಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್‌ನ ಅಸಲಿ ಮುಖವಾಡ ರಾಜ್ಯದ ಜನತೆಯ ಮುಂದೆ ಕಳಚಿಡಲಿದ್ದೇವೆ ಎಂದರು.

ಕ್ಷೇತ್ರದಲ್ಲಿ ೫೦ ಲಕ್ಷ ರು.ಗಳ ಕಾಮಗಾರಿನಗರದ ಸರಕಾರಿ ಬಾಲಕೀಯರ ಪ್ರೌಢಶಾಲೆಯಲ್ಲಿ ೫ ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಶೆಲ್ಟರ್‌ನ್ನು ಉದ್ಘಾಟಿಸಿದರು.

ಕೆಜಿಎಫ್ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳ ಕಾಂಪೌಂಡ್, ಶಾಲೆಯ ಕಟ್ಟಡ, ಶಾಲೆಗೆ ಶುದ್ದ ಕುಡಿವ ನೀರಿನ ಘಟಕಗಳುನ್ನು ನೀಡಿರುವುದಾಗಿ ತಿಳಿಸಿದರು. ಮುಖಂಡರಾದ ರವಿರೆಡ್ಡಿ, ಪ್ರಸನ್ನರೆಡ್ಡಿ, ಸದಾಶಿವರೆಡ್ಡಿ, ನಾಗಭೂಷನ್, ಡಿ.ಕೆ.ರೇಖಾ, ದಿನೇಶ್, ವೀಣಾ ಹೆಗ್ಡೆ, ದನಶೇಖರ್ ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ