ಶಿಕ್ಷಣ ಕ್ಷೇತ್ರವನ್ನು ಕಾಂಗ್ರೆಸ್‌ ಸರ್ಕಾರ ಕಡೆಗಣಿಸಿದೆ

KannadaprabhaNewsNetwork |  
Published : May 29, 2024, 12:53 AM IST
ಡಾ. ವೈ.ಎ. ನಾರಾಯಣ ಸ್ವಾಮಿ ಪರವಾಗಿ ಮತಯಾಚನೆ | Kannada Prabha

ಸಾರಾಂಶ

ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸಾಕಷ್ಟು ಬಾರಿ ನಾರಾಯಣಸ್ವಾಮಿ ಹೋರಾಟ ಮಾಡಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಆದ್ದರಿಂದ ಅವರನ್ನು ಬೆಂಬಲಿಸಲು ಕೋರಿಕೆ

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಕಾಳಜಿಯನ್ನು ತೋರದೆ ವಿವಿಧ ರೀತಿಯ ಆದೇಶಗಳನ್ನು ಜಾರಿ ಮಾಡುವ ಮೂಲಕ ಮಕ್ಕಳು ಮತ್ತು ಶಿಕ್ಷಕರಲ್ಲಿ ಗೊಂದಲ ಮೂಡಿಸಿದೆ ಎಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಎನ್ ಎಂ ರವಿನಾರಾಯಣ ರೆಡ್ಡಿ ತಿಳಿಸಿದರು.

ನಗರದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣ ಸ್ವಾಮಿ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

ನಾರಾಯಣಸ್ವಾಮಿಗೆ ಬೆಂಬಲಿಸಿ

ವೈಎ ನಾರಾಯಣಸ್ವಾಮಿ ರವರು ಶಿಕ್ಷಕರ ಆತ್ಮ ಬಂಧು ಅವರು ಗೆಲುವು ಖಚಿತ ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಖಾಸಗಿ ಶಿಕ್ಷಕರ ಅನೇಕ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಇನ್ನಷ್ಟು ಸೇವೆ ಮಾಡಲು ಮತ್ತೆ ಸ್ಪರ್ಧೆ ಮಾಡುತ್ತಿದ್ದಾರೆ ನಿಮ್ಮ ಆಶೀರ್ವಾದ ಅವರಿಗೆ ಇರಲಿ ಎಂದು ರಮೇಶ್ ರಾವ್ ತಿಳಿಸಿದರುಬಿಜೆಪಿ ನಗರ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯರಾದ ಮಾರ್ಕೆಟ್ ಮೋಹನ್ ರವರು ಮಾತನಾಡಿ ವೈ ಎ ನಾರಾಯಣಸ್ವಾಮಿ ಅವರು ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸಾಕಷ್ಟು ಬಾರಿ ಹೋರಾಟ ಮಾಡಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕೂಡ ಕಂಡುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ನಾರಾಯಣಸ್ವಾಮಿ ಒಳ್ಳೆಯ ಬಾಂಧವ್ಯ, ಒಡನಾಟ ಹೊಂದಿದ್ದಾರೆ. ಈ ಬಾರಿ ಸಹಾ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಪ್ರಥಮ ಪ್ರಾಶಸ್ತ್ಯದ ಮತ ಹಾಕಿ

ಡಾ.ಶಶಿಧರ್ ರವರು ಮಾತನಾಡಿ ಈ ಬಾರಿ ನರೇಂದ್ರ ಮೋದಿ ಹವಾ ಹಾಗೂ ವೈ ಎ ನಾರಾಯಣಸ್ವಾಮಿ ವರ್ಚಸ್ಸಿನಿಂದ ಗೆಲುವು ಸಲಭ ಆಗಲಿದೆ ಅದುದರಿಂದ ವೈ ಎ ನಾರಾಯಣಸ್ವಾಮಿ ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ರಮೇಶ್ ರಾವ್, ಬಿಜೆಪಿ ಪಕ್ಷದ ನಗರ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮೃತ್ಯುಂಜಯ ಜಯಣ್ಣ, ವೇಣುಮಾದವ್, ರಘು, ಶುಗರ್ ಫ್ಯಾಕ್ಟರಿ ರಮೇಶ್, ವೆಂಕಟಾದ್ರಿ, ಪರನಿಧಿ ಮಂಜುನಾಥ್, ನಗರ ಎಸ್ಟಿ ಮೋರ್ಚಾದ ಅಧ್ಯಕ್ಷ ಶಾಂತಕುಮಾರ್, ಈಶ್ವರ್, ಮಾರುತಿ, ಭರತ್, ಮುಂತಾದವರು ಉಪಸ್ಥಿತರಿದ್ದರು,

PREV

Recommended Stories

ಮಹಿಳೆಯ ವಿರುದ್ಧದ ಪೋಕ್ಸೋ ಕೇಸ್‌ ರದ್ದತಿಗೆ ಕೋರ್ಟ್‌ ನಕಾರ
ಧರ್ಮಸ್ಥಳ ಪ್ರಕರಣ ಕುರಿತು ಡಾ.ಪರಮೇಶ್ವರ್‌ ಉತ್ತರಕ್ಕೆ ವಿಪಕ್ಷ ಅಸಮಾಧಾನ