ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಡಿಸಿ ತಮ್ಮಣ್ಣ ಬುಧವಾರ ಹೇಳಿದರು.
ಕನ್ನಡಪ್ರಭ ವಾರ್ತೆ ಮದ್ದೂರು
ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಡಿಸಿ ತಮ್ಮಣ್ಣ ಬುಧವಾರ ಹೇಳಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಥವಾ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕು ಎನ್ನುವುದು ನಮ್ಮ ಹಕ್ಕೊತ್ತಾಯ ಮಂಡಿಸಿ ಪಕ್ಷದ ವರಿಷ್ಠ ರಿಗೆ ಕಳುಹಿಸಲಾಗಿದೆ ಎಂದರು.
ಈ ಪೈಕಿ ಮೂವರು ಚುನಾವಣೆಯಲ್ಲಿ ಸ್ಪರ್ಧೆ ನಡೆಯದಿದ್ದಲ್ಲಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಪಕ್ಷದ ಓರ್ವ ಶಾಸಕ ಹಾಗೂ ಮಾಜಿ ಶಾಸಕರು ನಂತರ ದಿನಗಳಲ್ಲಿ ಚರ್ಚೆ ನಡೆಸಿ ಮಾಜಿ ಶಾಸಕರಿಗೆ ಅವಕಾಶ ನೀಡಬೇಕು ಇಲ್ಲವೇ ಬೇರೆಯವರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವಂತೆ ಎಂದು ಪಕ್ಷದ ವರಿಷ್ಠರಿಗೆ ಶಿಫಾರಸ್ಸು ಮಾಡಲಾಗುವುದು ಎಂದರು.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡಬೇಕು ಎಂಬ ಚರ್ಚೆ ಮುನ್ನಲೆಗೆ ಬಂದಿರುವುದು ನಿಜ. ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಆದರೆ, ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕಳಿಸಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ ಎಂದರು.
ಒಂದು ವೇಳೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟು ಕೊಡಬೇಕಾದ ಸಂದರ್ಭ ಅನಿವಾರ್ಯವಾದಲ್ಲಿ ಜೆಡಿಎಸ್ ಪಕ್ಷದ ಶಾಸಕರು. ಮಾಜಿ ಶಾಸಕರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವರಿಷ್ಠ ತೀರ್ಮಾನದಂತೆ ಬಿಜೆಪಿಗೆ ಅಭ್ಯರ್ಥಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ ಎಂದು ಮಾಜಿ ಸಚಿವ ಡಿಸಿ ತಮ್ಮಣ್ಣ ಸ್ಪಷ್ಟಪಡಿಸಿದರು.
ಹಣಬಲವಿರುವ ವ್ಯಕ್ತಿಗೆ ಕಾಂಗ್ರೆಸ್ ಮಣೆ
ಮದ್ದೂರು: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಣಬಲದ ವ್ಯಕ್ತಿಯನ್ನು ಕಣಕ್ಕಿಳಿಸಲು ಹುಡುಕುತ್ತಿರಬಹುದು ಎಂದು ಮಾಜಿ ಸಚಿವ ಡಿ.ಸಿ.ತಮಣ್ಣ ವೆಂಗ್ಯ ವಾಡಿದರು. ಕಾಂಗ್ರೆಸ್ ಪಕ್ಷದ ನಾಯಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಕ್ರಮ ಮತ್ತು ಸಕ್ರಮವಾಗಿ ಕೊಠಡಿಯಲ್ಲಿ ಹಣ ಸಂಗ್ರಹಿಸಿರುವ ವ್ಯಕ್ತಿಗಳನ್ನು ಹುಡುಕುತ್ತಿದೆ. ಅಂತಹ ವ್ಯಕ್ತಿ ಸಿಕ್ಕಿದ ನಂತರ ಅಭ್ಯರ್ಥಿ ಘೋಷಣೆ ಮಾಡಬಹುದು ಎಂದು ಲೇವಡಿ ಮಾಡಿದರು.