ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

KannadaprabhaNewsNetwork |  
Published : Oct 03, 2024, 01:22 AM ISTUpdated : Oct 03, 2024, 04:58 AM IST
೦೧ಕೆಎಲ್‌ಆರ್-೧೦ಕೋಲಾರದ ಪಾಲಸಂದ್ರ ಲೇಔಟ್‌ನ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಭಾರತ ಕಮ್ಯುನಿಷ್ಟ್ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಪಕ್ಷದ ತಾಲೂಕು ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಮಾತನಾಡಿದರು. | Kannada Prabha

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.

 ಕೋಲಾರ : ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಎಂ ತಾಲೂಕು ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಆರೋಪಿಸಿದರು.ನಗರದ ಪಾಲಸಂದ್ರ ಲೇಔಟ್‌ನ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಭಾರತ ಕಮ್ಯುನಿಷ್ಟ್ (ಮಾರ್ಕ್ಸ್‌ವಾದಿ) ಪಕ್ಷದ ನಗರ ಸಮ್ಮೇಳನದ ಭಾಗವಾಗಿ ಧ್ವಜಾರೋಹಣದಲ್ಲಿ ಮಾತನಾಡಿದರು.

ಅಗತ್ಯ ವಸ್ತುಗಳ ದರ ಏರಿಕೆ

ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೊಳಿಸುತ್ತಿದೆ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದರು.ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.ಮಿತಿ ಮೀರಿದ ಭ್ರಷ್ಟಾಚಾರ

ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ, ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪತ್ರಕರ್ತರು ಹೆದರದೆ ಕರ್ತವ್ಯ ನಿರ್ವಹಿಸಿ: ಬಸವರಾಜ ಹೊರಟ್ಟಿ
ಸಂವಿಧಾನದ ಕುರಿತು ಜಾಗೃತಿ ಮೂಡಿಸಿ: ಸತೀಶ್ ಜಾರಕಿಹೊಳಿ