ಕನ್ನಡಪ್ರಭ ವಾರ್ತೆ ಕೋಲಾರ
ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ದಲಿತ ಸಂಘಟನೆಗಳು ಹಲವಾರು ಭಾರಿ ಪ್ರತಿಭಟಿಸಿ ಸಾರ್ವಜನಿಕರ ಗಮನಕ್ಕೆ ತರಲಾಗಿದೆ, ಆದರೂ ಸರ್ಕಾರವು ದಲಿತ ಅಭಿವೃದ್ದಿಗೆ ಮೀಸಲಾಗಿದ್ದ ಅನುದಾನ ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದೆ ಎಂದರು.
ಯರಗೋಳ್ ನೀರು ಪೂರೈಸುತ್ತಿಲ್ಲರಾಜ್ಯ ಸರ್ಕಾರದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಯಾವುದೇ ರೀತಿ ಅನುದಾನದ ಕೊರತೆ ಇಲ್ಲ ಎಂದು ಪ್ರಚಾರ ಮಾಡುತ್ತಿದೆ, ಹೊರತಾಗಿ ಜಿಲ್ಲಾ ಕೇಂದ್ರದಲ್ಲಿ ಸುಮಾರು ೨.೫ ಲಕ್ಷ ಜನಸಂಖ್ಯೆ ಇದ್ದು ಕನಿಷ್ಟ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಕುಡಿಯುವ ನೀರಿಗಾಗಿ ಯರಗೋಳ್ ಯೋಜನೆಯನ್ನು ಲೋಕಾರ್ಪಣೆ ಮಾಡಿ ಹಲವಾರು ತಿಂಗಳು ಕಳೆದರೂ ಈವರೆಗೆ ಯರಗೋಳ್ ನೀರು ಜನತೆ ತಲುಪಿಲ್ಲ ಎಂಬುವುದಕ್ಕೆ ನಮ್ಮ ಪಿ.ಸಿ ಬಡಾವಣೆಯೇ ಉದಾಹರಣೆಯಾಗಿದೆ ಎಂದರು.
ಕೋಲಾರ ವಿಧಾನ ಸಭಾ ಶಾಸಕ ಕೊತ್ತೂರು ಮಂಜುನಾಥ್ ೨೦೧೩ರಲ್ಲಿ ಮುಳಬಾಗಿಲು ವಿಧಾನಸಭಾ ಮೀಸಲು ಕ್ಷೇತ್ರದಲ್ಲಿ ಸುಳ್ಳು ಜಾತಿ ಪ್ರಮಾಣ ಸಲ್ಲಿಸಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ದುರ್‍ಬಳಿಸಿಕೊಂಡಿರುವ ವಿರುದ್ಧ ಸರ್ಕಾರವು ಹೈಕೋರ್ಟ್ ತೀರ್ಪಿನ ಪ್ರಕಾರ ಶೀಘ್ರವೇ ಕಾನೂನು ಕ್ರಮ ಜರುಗಿಸಬೇಕಾಗಿದೆ, ಆದರೆ ಶಾಸಕರಿಗೆ ಮೇಲ್ಮನವಿ ಸಲ್ಲಿಕೆಗೆ ಸರ್ಕಾರವು ಅವಕಾಶ ನೀಡಿದ ಹಿನ್ನಲೆಯಲ್ಲಿ ಕಾನೂನು ಕ್ರಮಕ್ಕೆ ತಡೆಯಾಜ್ಞೆ ತರಲಾಗಿದೆ ಇದನ್ನು ತೆರವು ಮಾಡಿಸಿ, ಅಟ್ರಾಸಿಟಿ ಪ್ರಕರಣ ದಾಖಲು ಮಾಡಿ ಸೂಕ್ತ ಕ್ರಮಜರುಗಿಸಬೇಕೆಂದು ಆಗ್ರಹಿಸಿದರು.ಸರ್ಕಾರಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿರುವ ಶಾಸಕ ಕೊತ್ತೂರು ಮಂಜುನಾಥ್‌ರಿಗೆ ಸಂವಿಧಾನದ ಮೇಲೆ ಕನಿಷ್ಠ ಗೌರವ ಇದ್ದಲ್ಲಿ ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಜೇಶ್ ಸಿಂಗ್ ಇದ್ದರು.