ಕರಿಯ, ಪಾಕ್‌ ಜಿಂದಾಬಾದ್‌ ಅಂದ್ರೂ ಕ್ರಮವಿಲ್ಲ, ನಮಗಷ್ಟೇ ನೋಟಿಸ್‌ : ಚಂದ್ರಶೇಖರನಾಥ ಶ್ರೀ

KannadaprabhaNewsNetwork |  
Published : Dec 03, 2024, 12:33 AM ISTUpdated : Dec 03, 2024, 05:56 AM IST
Swamiji

ಸಾರಾಂಶ

ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದರೂ ಅವರನ್ನು ಏನೂ ಮಾಡಿಲ್ಲ. ಆದರೆ ತಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡುತ್ತಾರೆ 

 ಬೆಂಗಳೂರು : ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದರೂ ಅವರನ್ನು ಏನೂ ಮಾಡಿಲ್ಲ. ಆದರೆ ತಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡುತ್ತಾರೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು’ ಎಂದು ಹೇಳಿದ್ದಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕುಮಾರಸ್ವಾಮಿ ವಿಷಯ, ಪಾಕಿಸ್ತಾನ್‌ ಜಿಂದಾಬಾದ್‌ ಸೇರಿ ಎಂತೆಂಥ ವಿಷಯಗಳಾಗಿಲ್ಲ, ಆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ. ತಮಗೆ ಹುಷಾರಿಲ್ಲ, ನಡೆಯಲೂ ಆಗುವುದಿಲ್ಲ ಎಂದು ಕ್ಷಮೆ ಕೇಳಿದರೂ ಈ ವಯಸ್ಸಿನಲ್ಲಿ ಕೇಸ್‌ ಹಾಕುತ್ತಾರೆ. ಪೊಲೀಸರು ನೋಟಿಸ್‌ ನೀಡಿದ್ದು ತಮಗೆ ಹೋಗಲು ಸಾಧ್ಯವಿಲ್ಲ. ಅವಶ್ಯವಿದ್ದರೆ ಮಠಕ್ಕೆ ಬಂದು ಹೇಳಿಕೆ ಪಡೆಯಲಿ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬಿಜೆಪಿಗ ಮುಖಂಡಗೆ ನೀಡಿದ್ದ ಕರ್ನಾಟಕ ರಾಜ್ಯ ಸಚಿವ ಸ್ಥಾನ ವಾಪಸ್‌!
ಗಲ್ವಾನ್‌ ಸಂಘರ್ಷದ ಸೇನಾ ಪುಸ್ತಕದಿಂದ‘ರಾಜಕೀಯ ಕದನ’!