ಚನ್ನಪಟ್ಟಣ ಬಿಜೆಪಿಗೆ ಬಿಡಲು ಒಪ್ಪಂದ ಆಗಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Published : Oct 11, 2024, 05:12 AM IST
HD Kumaraswamy

ಸಾರಾಂಶ

ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವ‌ರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ :  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಕ್ಷಣ ದವರೆಗೆ ಯಾವುದೇ ಒಪ್ಪಂದ ಆಗಿಲ್ಲ. ಯಾವುದೇ ಸಂದರ್ಭದಲ್ಲೂ ಇಂತಹ ಒಂದು ಒಪ್ಪಂದ ನಡೆದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಗುರುವಾರ ಮಾತನಾಡಿದರು. ಲೋಕಸಭೆ ಚುನಾವಣೆಗೆ ನಾನು ಮೊದಲು ಸೂಚಿಸಿದ್ದೇ ಸಿ.ಪಿ.ಯೋಗೇಶ್ವ‌ರ್ ಹೆಸರು. 'ಚುನಾವಣೆ ನಡೆವ 2 ತಿಂಗಳ ಮುಂಚೆಯೇ ಬೆಂಗಳೂರು ಗ್ರಾಮಾಂತರದಿಂದ ಯೋಗೇಶ್ವರ್ 3 ಅವರಿಗೆ ಸ್ಪರ್ಧೆ ಮಾಡುವಂತೆ ಹೇಳಿದ್ದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿ ಆದರೂ ಗೆಲ್ಲುವ ಅವಕಾಶ ಇದೆ. ಈ ಅವಕಾಶವನ್ನು ಏಕೆ ಕಳೆದುಕೊಳ್ಳುತ್ತಿರಾ? ನೀವು ನಿಂತು ಕೊಳ್ಳಿ ಎಂದು ಸಿಪಿವೈಗೆ ಹೇಳಿದ್ದೆ. ಆದರೆ, ನಂತರ ದೆಹಲಿಯಲ್ಲಿ ಗೃಹ ಸಚಿವರು ಡಾ. ಮಂಜುನಾಥ್ ಅವರನ್ನು ಒಪ್ಪಿಸು ವಂತೆ ಹೇಳಿದರು. ಅಮಿತ್ ಶಾ ಅವರ ಮಾತಿಗೆ ನಾನು ತಲೆಬಾಗಿ, ಮಂಜುನಾಥ್ ಅವರನ್ನು ಬಿಜೆಪಿ ಯಿಂದ ಅಭ್ಯರ್ಥಿ ಮಾಡಿದೆ ಎಂದರು.

ಮೈತ್ರಿಗೆ ಮೂಲ ನಾನೇ ಎಂಬ ಸಿಪಿವೈ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, 'ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವ‌ರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ. ಇದು ಪ್ರಾರಂಭಿಕ ಹಂತವಾಗಿದ್ದು, ಹೊರಗಡೆ ಚರ್ಚೆ ಮಾಡಬೇಡಿ ಎಂದು ಹೇಳಿದ್ದೆ. ಉಪಚುನಾವ ಣೆಗೆ ನಮ್ಮಲ್ಲೂ ಅಭ್ಯರ್ಥಿ ಹಾಕಬೇಕು, ಬೇಡ ಎಂಬ ಚರ್ಚೆಗಳು ನಡೆಯುತ್ತಿವೆ. ನೀವು ನಿಲ್ಲ ಬೇಕು ಅಂತಿದ್ದರೆ ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತಾ ತಿಳಿಸಿದ್ದೆ. ಅವರು ಯಾವ ರೀತಿ ನಡೆದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. ನನ್ನ ಹತ್ತಿರ ಅವರು ಮಾತನಾಡಿಲ್ಲ' ಹೇಳಿದರು.

ಎಂದು ಉಪಚುನಾವಣೆಗೆ ನಿಖಿಲ್ ಅವರ ಸ್ಪರ್ಧೆ ಬಗ್ಗೆ ಈವರೆಗೂ ನಾನು ಯಾವುದೇ ತೀರ್ಮಾನ ಮಾಡಿಲ್ಲ. ಮೊದಲಿಗೆ ಮತದಾರರ ನಾಡಿಮಿಡಿತ ಅರ್ಥ ಮಾಡಿಕೊಳ್ಳಬೇಕು.ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ದೆಹಲಿಯ ಬಿಜೆಪಿ ನಾಯಕರು ಮತ್ತು ನಾವು ಸೇರಿ ಮಾತನಾಡುತ್ತೇವೆ. ಎನ್‌ಡಿಎ ಅಭ್ಯರ್ಥಿ ಯಾರಾಗಬೇಕು ಅಂತ ತೀರ್ಮಾನ ಮಾಡುತ್ತೇವೆ. ಬಿಜೆಪಿ ಕಾರ್ಯಕರ್ತರು, ಮುಖಂಡರ ಸಭೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಕಳೆದ ಎರಡು ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದಿದ್ದೀವಿ. ಮೊದಲಿನಿಂದಲೂ ಇದು ಜನತಾದಳದ ಭದ್ರಕೋಟೆ. ನಮ್ಮಲ್ಲಿನ ಕೆಲವೊಂದಿಷ್ಟು ತಿಕ್ಕಾಟಕ್ಕೆ ಸ್ವಲ್ಪ ವೀಕ್ ಆಗಿದೆ ಎಂದರು.

ಟಿಕೆಟ್‌ಗೆ ಯೋಗಿ ಯತ್ನ ತಪ್ಪು ಅಲ್ಲ

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಗೆಲುವಿಗೆ ಯೋಗೇಶ್ವ‌ರ್ ಶ್ರಮ ಇದೆ. ಅವರಿಗೆ ಕ್ಷೇತ್ರ ದಲ್ಲಿ ಹಿಡಿತ ಇದೆ. ಚನ್ನಪಟ್ಟಣ ಉಪ ಚುನಾವಣೆ ಬಿಜೆಪಿ ಟಿಕೆಟ್‌ಗೆ ಅವರು ಪ್ರಯತ್ನಿಸುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪ್ರಿಯಾಂಕಾ ಗಾಂಧಿಕೈ ಪ್ರಧಾನಿ ಅಭ್ಯರ್ಥಿ ಆಗಲು ಭಾರಿ ಒತ್ತಡ!
''ದ್ವೇಷ ಭಾಷಣ ಕಾಯ್ದೆ : ಜಾತಿ ನಿಂದನೆಯ ರೀತಿ ದುರ್ಬಳಕೆ ಆಗಬಹುದು''