ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ಒಗ್ಗಟ್ಟಾಗಿದ್ದೇವೆ: ಸತೀಶ ಜಾರಕಿಹೊಳಿ

Published : Jan 26, 2025, 11:56 AM IST
Satish jarkiholi

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ ಜಿಲ್ಲೆ ಹುಕ್ಕೇರಿಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಮುನಿಸಿಲ್ಲ‌. ಮೊನ್ನೆ ಎಲ್ಲರೂ ಸೇರಿ ಬೆಳಗಾವಿಯಲ್ಲಿ ಅತ್ಯಂತ ಯಶಸ್ವಿ ಕಾರ್ಯಕ್ರಮ ಮಾಡಿದ್ದೇವೆ. ಮುನಿಸು ಅನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ಪ್ರಶ್ನೆ ಮಾಡಬೇಕು. ಆ ಬಗ್ಗೆ ಹೇಳುವ ಅಧಿಕಾರ ನನಗೆ ಇಲ್ಲ ಎಂದರು‌.

ಶ್ರೀರಾಮುಲು ಕಾಂಗ್ರೆಸ್ ಗೆ ಬರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮ ಪಕ್ಷದ ಸಿದ್ಧಾಂತ ಒಪ್ಪಿ ಬರುವ ಎಲ್ಲರಿಗೂ ಸ್ವಾಗತ. ಖಾಸಗಿಯಾಗಿ ಶ್ರೀರಾಮುಲು ನನ್ನ ಸಂಪರ್ಕದಲ್ಲಿದ್ದಾರೆ. ರಾಜಕೀಯವಾಗಿ ಇಲ್ಲ.‌ ಪಕ್ಷಕ್ಕೆ ಬರುವುದು, ಬಿಡುವುದು ಅವರವರಿಷ್ಟ. ನಾವು ಕರೆದರೆ ಯಾರೂ ಬರಲ್ಲ, ಅವರೇ ಬರಬೇಕಾಗುತ್ತದೆ‌. ಶ್ರೀರಾಮುಲುರನ್ನು ಕಾಂಗ್ರೆಸ್ ಗೆ ಕರೆ ತರುವ ಪ್ರಯತ್ನದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.

2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ಮುಖ್ಯಮಂತ್ರಿ ಹುದ್ದೆಗೆ ಕ್ಲೇಮ್ ಮಾಡ್ತೀನಿ. ನಾನು 2028ಕ್ಕೆ ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಸಿಎಂ ಆಗ್ತೀನಿ ಎಂದು ಹೇಳಿಲ್ಲ.‌ ನನ್ನನ್ನು ಸಿಎಂ ಮಾಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಪಂಚರಾಜ್ಯಗಳ ಚುನಾವಣೆ ಮುಹೂರ್ತ ಫಿಕ್ಸ್ : ಇಲ್ಲಿ ಗೆಲ್ಲೋರ್ಯಾರು ? ಸೋಲು ಯಾರಿಗೆ?
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!