)
ನವದೆಹಲಿ: ಭಾಷಾ ವಿಷಯವಾಗಿ ಕರ್ನಾಟಕ ಹಾಗೂ ಉತ್ತರ ಭಾರತೀಯರ ನಡುವೆ ಆಗಾಗ ಸಂಘರ್ಷಗಳು ವರದಿಯಾಗುತ್ತಿರುವ ನಡುವೆಯೇ, ‘ಕರ್ನಾಟಕದಲ್ಲಿ ಉದ್ಯೋಗದಲ್ಲಿರುವವರು ಇಲ್ಲಿಯ ಸ್ಥಳೀಯ ಭಾಷೆಯನ್ನು ಕಲಿಯಬೇಕು ಮತ್ತು ಬಳಸಬೇಕು. ಕನ್ನಡದಲ್ಲಿ ಕೆಲವು ಮಾತುಗಳನ್ನಾಡಿ, ಕನ್ನಡಿಗರಿಗೆ ಗೌರವ ಸೂಚಿಸಬೇಕು’ ಎಂದು ತಾಂತ್ರಿಕ ಹೂಡಿಕೆದಾರ, ಆರಿನ್ ಕ್ಯಾಪಿಟಲ್‌ನ ಮುಖ್ಯಸ್ಥ ಮೋಹನದಾಸ್ ಪೈ ಹೇಳಿದ್ದಾರೆ.
ಇಲ್ಲಿ ಕನ್ನಡ ಮಾತನಾಡುವ ಸ್ಥಳೀಯರ ಸಂಖ್ಯೆ ಕೇವಲ ಶೇ.33ರಷ್ಟಿದೆ. ಬಹಳಷ್ಟು ಜನ ಇಲ್ಲಿಗೆ ಬಂದು, ಒಳ್ಳೆಯ ಕೆಲಸ ಮಾಡಿ ಪ್ರಯೋಜನ ಪಡೆದಿದ್ದಾರೆ.ಇತ್ತೀಚೆಗೆ ಗ್ರಾಹಕರೊಂದಿಗೆ ಕನ್ನಡ ಮಾತಾಡಲು ನಿರಾಕರಿಸಿದ್ದಲ್ಲದೆ, ಅಹಂಕಾರದ ವರ್ತನೆಯಿಂದ ಸುದ್ದಿಯಾಗಿದ್ದ ಎಸ್‌ಬಿಐ ಬ್ಯಾಂಕ್‌ನ ಹಿಂದಿಭಾಷಿಕ ಉದ್ಯೋಗಿ ಕುರಿತು ಪ್ರಸ್ತಾವಿಸಿದ ಅವರು, ‘ಆಕೆ ಸೇವಾ ಕೆಲಸದಲ್ಲಿದ್ದಾಕೆ. ಸರ್, ಕ್ಷಮಿಸಿ. ನನಗೆ ಕನ್ನಡ ಮಾತಾಡಲು ಬರುವುದಿಲ್ಲ. ಕಲಿಯುತ್ತಿದ್ದೇನೆ. ನನ್ನ ಸಹೋದ್ಯೋಗಿಗಳ ನೆರವು ಪಡೆಯುವೆ ಎಂದಿದ್ದರೆ ಸಾಕಿತ್ತು. ಸಮಸ್ಯೆಯೇ ಉದ್ಭವಿಸುತ್ತಿರಲಿಲ್ಲ’ ಎಂದರು.