ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಸಿಎಂಗೆ ಶೋಭೆ ತರಲ್ಲ: ಎಚ್‌ಡಿಕೆ

Published : Aug 27, 2024, 05:46 AM IST
HD Kumaraswamy

ಸಾರಾಂಶ

ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು :  ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಅವರು, ಇದು ಮೂಲ ದಾಖಲೆಯಾಗಿದ್ದು, ಮುಡಾದಲ್ಲಿದೆ. ಅವರ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ಅವರ ಮನೆಯಲ್ಲಿದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ಈ ದಾಖಲೆಯನ್ನೇಕೆ ಕೋರ್ಟ್‌ಗೆ ಕೊಟ್ಟಿಲ್ಲ.!? ನ್ಯಾಯಾಲಯವನ್ನೂ ದಾರಿ ತಪ್ಪಿಸಲಾಗುತ್ತಿದೆ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ, ಹೇಗೆ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

PREV

Recommended Stories

ವಿಜಯ್‌ ಚುನಾವಣಾ ರಣಕಹಳೆ - ಇಲ್ಲಿ ಶುರುವಾದ ರಾಜಕೀಯ ಕಾರ್ಯಕ್ಕೆ ಮಹಾ ತಿರುವು
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ