‘ಉಪ ಚುನಾವಣೆ ರಿಸಲ್ಟ್‌ ಬಳಿಕ ಸಿಎಂ ಬದಲಾವಣೆ ಬಗ್ಗೆ ತಿಳಿದಿಲ್ಲ’

Published : Apr 27, 2026, 08:17 AM IST
  Yathindra

ಸಾರಾಂಶ

ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತದೆ ಎಂಬ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಯಾರು ಮಾತನಾಡುತ್ತಿದ್ದಾರೋ ಅವರನ್ನೇ ಈ ವಿಷಯವಾಗಿ ಕೇಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

 ರಾಯಚೂರು :  ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತದೆ ಎಂಬ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಯಾರು ಮಾತನಾಡುತ್ತಿದ್ದಾರೋ ಅವರನ್ನೇ ಈ ವಿಷಯವಾಗಿ ಕೇಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ನನಗಂತು ಈ ಬಗ್ಗೆ ಮಾಹಿತಿ ಇಲ್ಲ. ಯಾರು ಈ ಬಗ್ಗೆ ಮಾತನಾಡುತ್ತಿದ್ದಾರೋ ಅವರನ್ನೇ ಕೇಳಬೇಕು. ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಸದನದಲ್ಲಿಯೇ ಸಿಎಂ ಸ್ಪಷ್ಟ ಹೇಳಿಕೆ ನೀಡಿದ್ದಾರೆ. ಪಕ್ಷದ ಹೈಕಮಾಂಡ್‌ ಎಲ್ಲವನ್ನು ಗಮನಿಸುತ್ತಿದೆ ಎಂದರು.

ಪ್ರತಿಯೊಬ್ಬ ಶಾಸಕರಿಗೂ ಮಂತ್ರಿ ಸ್ಥಾನ ಸಿಗಬೇಕೆಂಬ ಆಕಾಂಕ್ಷೆ ಇರುತ್ತದೆ

ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆಯಾದಾಗ ಪ್ರತಿಯೊಬ್ಬ ಶಾಸಕರಿಗೂ ಮಂತ್ರಿ ಸ್ಥಾನ ಸಿಗಬೇಕೆಂಬ ಆಕಾಂಕ್ಷೆ ಇರುತ್ತದೆ. ರಾಯಚೂರು ಜಿಲ್ಲೆಯ ಎಲ್ಲಾ ಶಾಸಕರೂ ಸಚಿವ ಸ್ಥಾನಕ್ಕೆ ಅರ್ಹರಿದ್ದಾರೆ ಎಂದರು.

ಹೈಕಮಾಂಡ್‌ ಅನ್ನು ಭೇಟಿಯಾಗುವುದು ಸಾಮಾನ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ‌.ಸುರೇಶ್ ಅವರ ದೆಹಲಿ ಭೇಟಿ ಕುರಿತು ಪ್ರತಿಕ್ರಿಯಿಸಿ, ಪ್ರತಿಯೊಂದು ಪಕ್ಷದಲ್ಲಿಯೂ, ಪ್ರತಿಯೊಂದು ಸರ್ಕಾರದಲ್ಲಿಯೂ ಆ ಪಕ್ಷದ ಹೈಕಮಾಂಡ್‌ ಅನ್ನು ಭೇಟಿಯಾಗುವುದು ಸಾಮಾನ್ಯ. ಡಿಕೆಶಿ ಅವರು ದೆಹಲಿಗೆ ಹೋದ ಮಾತ್ರಕ್ಕೆ ಅದಕ್ಕೆ ಬೇರೊಂದು ಅರ್ಥ ಕಲ್ಪಿಸುವುದು ಬೇಕಿಲ್ಲ ಎಂದರು.

ಆದರೆ, ಆಯ್ಕೆ ಮಾಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುರುಬ ಸಮುದಾಯದ ನಾಯಕರು ಸಮರ್ಥರಾಗಿದ್ದು, ಅವರುಗಳಿಗೆ ರಾಜಕೀಯ ಪ್ರಾತಿನಿಧ್ಯತೆ ದೊರೆಯಬೇಕಾಗಿದೆ. ಈ ಬಗ್ಗೆ ಸಿಎಂ ಜೊತೆ ಸಮಾಲೋಚಿಸಲಾಗುವುದು

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಏನು ತೀರ್ಮಾನ ಆಗಿವೆಯೋ ಅವು ಜಾರಿ ಆಗ್ತವೆ : ಡಿಕೆ ಶಿವಕುಮಾರ್‌
7 ಪಕ್ಷಾಂತರಿಗಳ ಸದಸ್ಯತ್ವ ರದ್ದು : ರಾಜ್ಯಸಭೆ ಸ್ಪೀಕರ್‌ಗೆ ಆಪ್‌ ಮನವಿ