ವಿಧಾನಸೌಧದ ಮೆಟ್ಟಿಲು ಮೇಲೆ ನವಂಬರ್‌ 9ರಂದು ಉರ್ದು ಹಬ್ಬ: ಖಾದರ್‌

Published : Oct 01, 2026, 07:19 AM IST
UT Khader

ಸಾರಾಂಶ

ರಾಜ್ಯ ಸರ್ಕಾರ ನ.9 ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವ ಉರ್ದು ದಿನಾಚರಣೆ ಅಂಗವಾಗಿ ನ.9 ರಂದು ‘ಉರ್ದು ಹಬ್ಬ’ ಆಯೋಜಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ನ.9 ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವ ಉರ್ದು ದಿನಾಚರಣೆ ಅಂಗವಾಗಿ ನ.9 ರಂದು ‘ಉರ್ದು ಹಬ್ಬ’ ಆಯೋಜಿಸಲು ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಆವರಣದಲ್ಲಿ ವಿವಿಧ ಇಲಾಖೆಗಳು ಮತ್ತು ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿದೆ. ಇದೇ ರೀತಿ ಉರ್ದು ಭಾಷೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ನಡೆಸಬಹುದು ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ವಿವಿಧ ಸಮುದಾಯಗಳಿಗೆ ಪರಿಚಯಿಸುವುದು

ಉರ್ದು ಭಾಷೆ ಮತ್ತು ಸಾಹಿತ್ಯದ ಜೊತೆ ಅದರೊಂದಿಗೆ ಬೆಸೆದುಕೊಂಡಿರುವ ಸಂಸ್ಕೃತಿ, ಪರಂಪರೆ ಹಾಗೂ ಕಲಾ ಪ್ರಕಾರಗಳನ್ನು ರಾಜ್ಯದ ವಿವಿಧ ಸಮುದಾಯಗಳಿಗೆ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶ. ಪ್ರಸ್ತಾವಿತ ಉರ್ದು ಹಬ್ಬವನ್ನು ಕೇವಲ ಸಾಹಿತ್ಯ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೆ, ಉರ್ದು ಸಂಸ್ಕೃತಿ, ಪುಸ್ತಕ, ಆಹಾರ ಮತ್ತು ವಿವಿಧ ಕಲಾ ಪ್ರಕಾರಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪುಸ್ತಕ ಮೇಳ, ಆಹಾರೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಪುಸ್ತಕ ಮೇಳ, ಆಹಾರೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಬೃಹತ್ ಮುಶಾಯಿರಾ, ಪುಸ್ತಕ ಮೇಳ ಆಯೋಜಿಸುವ ಪ್ರಸ್ತಾವವಿದೆ. ಆ ಮೂಲಕ, ಉರ್ದು ಭಾಷೆ ಮತ್ತು ಸಾಹಿತ್ಯದ ವಿವಿಧ ಆಯಾಮಗಳನ್ನು ಸಾರ್ವಜನಿಕರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದರು.

- ವಿಶ್ವ ಉರ್ದು ದಿನದ ಅಂಗವಾಗಿ ಕಾರ್ಯಕ್ರಮ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ರಾಜ್ಯದ ಶೇ.75ರಷ್ಟು ಶಾಸಕರು ಕಮಿಷನ್‌ ಕೇಳ್ತಾರೆ : ಆರೋಪ - ಪ್ರತಿ ಕಾಮಗಾರಿ, ಟೆಂಡರ್‌ನಲ್ಲೂ ಹಸ್ತಕ್ಷೇಪ
ಡಿಕೆ ತವರಿಂದ ನಿಖಿಲ್‌ ರೈತ ಸ್ವಾಭಿಮಾನಿ ಯಾತ್ರೆ ಶುರು