ವಿಜಯೇಂದ್ರ ನಾಯಕತ್ವಕ್ಕೆ ರಮೇಶ್ ಜಾರಕಿಹೊಳಿ ವಿರೋಧ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ

Published : Sep 17, 2024, 10:52 AM IST
Ramesh Jarakiholi

ಸಾರಾಂಶ

ವಿಜಯೇಂದ್ರ ಅವರು ಬಿಜೆಪಿ  ಅಧ್ಯಕ್ಷರಾಗಿರುವುದನ್ನು ವಿರೋಧಿಸಿರುವ ರಮೇಶ್ ಜಾರಕಿಹೊಳಿ ಅವರು, ಪಕ್ಷಕ್ಕೆ ಭ್ರಷ್ಟಾಚಾರದ ಕಳಂಕ ತಂದಿರುವುದೇ ವಿಜಯೇಂದ್ರ ಎಂದು ಆರೋಪಿಸಿದ್ದಾರೆ. ಪಕ್ಷಕ್ಕೆ ಸಾಮೂಹಿಕ ನಾಯಕತ್ವದ ಅಗತ್ಯವಿದ್ದು, ಏಕವ್ಯಕ್ತಿ ನಾಯಕತ್ವವನ್ನು ಒಪ್ಪುವುದಿಲ್ಲ ಎಂದಿದ್ದಾರೆ.

ಅಥಣಿ : ವಿಜಯೇಂದ್ರ ಅವರು ಬಿಜೆಪಿ  ಅಧ್ಯಕ್ಷರಾಗಿರುವುದಕ್ಕೆ ನನ್ನ ವಿರೋಧವಿದೆ. ಪಕ್ಷಕ್ಕೆ ಭ್ರಷ್ಟತೆಯ ಲೇಪನಬಂದಿರುವುದೇ ವಿಜಯೇಂದ್ರ ಅವರಿಂದ. ಅವರಿಗೆ ನಮ್ಮ ಪಕ್ಷದ ಸಿದ್ಧಾಂತದ ಬಗ್ಗೆ ಎಳ್ಳಷ್ಟೂ ಗೊತ್ತಿಲ್ಲ. ಅವರ ನಾಯಕತ್ವ ನಾವು ಒಪ್ಪುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಅವರು ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ಅವರ ತಂದೆ ಬಿ.ಎಸ್.ಯಡಿಯೂರಪ್ಪರನ್ನು ನಾವು ಗೌರವಿಸುತ್ತೇವೆ. ಈಗಪಕ್ಷಕ್ಕೆ ಸಾಮೂಹಿಕ ನಾಯಕತ್ವದ ಅವಶ್ಯಕತೆ ಇದೆ.ಏಕವ್ಯಕ್ತಿಗೆ ಪಕ್ಷದ ಜವಾಬ್ದಾರಿ ನೀಡಬಾ ರದು. ಸಾಮೂಹಿಕ ನಾಯಕತ್ವಕ್ಕೆ ನೀಡಿದರೆ 136ಕ್ಕೂ ಅಧಿಕ ಸ್ಥಾನ ಗೆದ್ದು ತೋರಿಸುತ್ತೇವೆ ಎಂದು ಹೇಳಿದರು.

ರಾಜ್ಯಪಾಲರ ವಾಲ್ಮೀಕಿ ನಿಗಮ ಹಣ ದುರುಪಯೋಗ ಕುರಿತು ತ್ವರಿತವಾಗಿ ತನಿಖೆ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಇದು ಮುಡಾಗಿಂತ ದೊಡ್ಡ ಹಗರಣ. ಬಳ್ಳಾರಿಗೆ ಪಾದಯಾತ್ರೆ ಮಾಡಲು ಹೈಕಮಾಂಡ್ ಅನುಮತಿ ಕೇಳಿದ್ದೇವೆ ಎಂದರು.

PREV

Recommended Stories

ದೇಶದಲ್ಲೇ ನಾನೇ ನಂ.1 ಗೃಹ ಮಂತ್ರಿ: ಡಾ.ಪರಂ
ವರ್ಷಾಂತ್ಯಕ್ಕೆ ಡಿಕೆಶಿ ಸಿಎಂ ಎಂದ ಶಿವಗಂಗಾಗೆ ನೋಟಿಸ್‌