ಕಾಂಗ್ರೆಸ್‌ ಗ್ಯಾರಂಟಿಗೆ ಮತದಾರ ಮರುಳಾಗುವುದಿಲ್ಲ : ವೈ.ಎ.ನಾರಾಯಣ ಸ್ವಾಮಿ

KannadaprabhaNewsNetwork |  
Published : Apr 15, 2024, 01:23 AM ISTUpdated : Apr 15, 2024, 04:42 AM IST
ಸುದ್ದಿ ಚಿತ್ರ 2 ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಗಣ್ಯರು ಭಾಗಿ  | Kannada Prabha

ಸಾರಾಂಶ

ಅಂಬೇಡ್ಕರ್ ರವರನ್ನು ಅವಮಾನಿಸಿದ್ದು ಕಾಂಗ್ರೆಸ್. ಇವತ್ತು ಕಾಂಗ್ರೆಸ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಬಳಸಿಕೊಂಡು ಚುನಾವಣೆಗೆ ಹೊರಟಿದ್ದಾರೆ. ದೇಶದ ಜನತೆ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡಬೇಕು.

 ಶಿಡ್ಲಘಟ್ಟ :  ಗ್ಯಾರಂಟಿಗಳನ್ನು ನಂಬಿ ಚುನಾವಣೆ ನಡೆಸಲು ಹೊರಟಿರುವ ಕಾಂಗ್ರೆಸ್‌ ರಾಜ್ಯ ಮತ್ತು ದೇಶವನ್ನು ದಿವಾಳಿ ಮಾಡುತ್ತಿದೆ. ಮತದಾರರು ಎಚ್ಚೆತ್ತುಕೊಂಡು ದೇಶದ ರಕ್ಷಣೆಗಾಗಿ ಹಾಗೂ ಸಾರ್ವಭೌಮ ರಾಷ್ಟ್ರವನ್ನಾಗಿ ಪ್ರಪಂಚವನ್ನೇ ಆಳಬೇಕಾದರೆ ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಮನವಿ ಮಾಡಿದರು.

ತಾಲೂಕಿನ ದಿಬ್ಬೂರಹಳ್ಳಿ ಶ್ರೀ ಮಾರುತಿ ಚಿತ್ರ ಮಂದಿರದಲ್ಲಿ ಭಾನುವಾರ ನಡೆದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಮಲ್ಲೇಶಬಾಬುಗೆ ಬೆಂಬಲಿಸಿ

ಅಂಬೇಡ್ಕರ್ ರವರನ್ನು ಅವಮಾನಿಸಿದ್ದು ಕಾಂಗ್ರೆಸ್. ಇವತ್ತು ಕಾಂಗ್ರೆಸ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಬಳಸಿಕೊಂಡು ಚುನಾವಣೆಗೆ ಹೊರಟಿದ್ದಾರೆ. ದೇಶದ ಜನತೆ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡಬೇಕು. ಇದಕ್ಕಾಗಿ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದರು.ಮೋದಿ ಮತ್ತೆ ಪ್ರಧಾನಿ ಆಗ್ತಾರೆ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಮಾತನಾಡಿ, ’ದೇಶಕಂಡ ಅಪ್ರತಿಮ ನಾಯಕ ಮಾಜಿ ಪ್ರಧಾನಿ ದೇವೇಗೌಡರ ಆಸೆ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವುದಾಗಿದೆ. ಅದನ್ನು ನನಸು ಮಾಡುವ ಜವಾಬ್ದಾರಿ ನಮ್ಮ ಮೈತ್ರಿ ಪಕ್ಷಗಳ ಕಾರ್ಯಕರ್ತರ ಮೇಲಿದೆ’ ಎಂದರು.

ಅಭ್ಯರ್ಥಿ ಮಲ್ಲೇಶ್ ಬಾಬು ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ನಮ್ಮ ಕ್ಷೇತ್ರದ ಮತದಾರರ ಮೇಲೆ ನಂಬಿಕೆ ಇಟ್ಟು ನನ್ಮನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ನನ್ನ ಗೆಲುವಿಗೆ ಸಹಕಾರ ನೀಡಿ. ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಿ’ ಎಂದು ಕೋರಿದರು.

ಬಿಜೆಪಿ ಮುಖಂಡ ಸಿಕಲ್ ರಾಮಚಂದ್ರಗೌಡ ಮಾತನಾಡಿ, ದೇಶದ ಹಿತ ಕಾಪಾಡಲು ಪಣತೊಟ್ಟು ಮೂರನೇ ಬಾರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮವಹಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಮುನಿರಾಜು, ಗೋಪಿನಾಥ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ ಮುನಿಯಪ್ಪ, ಧನಂಜಯ್ ರೆಡ್ಡಿ, ಸೀಕಲ್ ಆನಂದ್ ಗೌಡ, ಉಮೇಶ್, ಮತ್ತಿತರರು ಇದ್ದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ