ಬಡವರ ಪರ ಬಜೆಟ್ ಮಂಡಿಸಿದ್ದೇವೆ ವಿಪಕ್ಷ ನಾಯಕರಿಗೆ ಅರ್ಥವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

KannadaprabhaNewsNetwork |  
Published : Feb 19, 2024, 01:32 AM ISTUpdated : Feb 19, 2024, 08:57 AM IST
ಸಿಎಂ ಸಿದ್ದರಾಮಯ್ಯ | Kannada Prabha

ಸಾರಾಂಶ

ನಾವು ಗ್ಯಾರಂಟಿ ಮಾತ್ರ ತಂದಿಲ್ಲ. ಬಡವರು ಪರವಾದ ಬಜೆಟ್ ಮಂಡಿಸಿದ್ದೇವೆ. ವಿರೋಧ ಪಕ್ಷಗಳ ನಾಯಕರಿಗೆ ಇದು ಅರ್ಥವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ನಾವು ಗ್ಯಾರಂಟಿ ಮಾತ್ರ ತಂದಿಲ್ಲ. ಬಡವರು ಪರವಾದ ಬಜೆಟ್ ಮಂಡಿಸಿದ್ದೇವೆ. ವಿರೋಧ ಪಕ್ಷಗಳ ನಾಯಕರಿಗೆ ಇದು ಅರ್ಥವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ತಾಲೂಕಿನ ಮಂಚನಹಳ್ಳಿಯಲ್ಲಿ ಶ್ರೀಭಕ್ತಕನಕದಾಸ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಮಂಡಿಸಿರುವ ಬಜೆಟ್ ಬಡರ ವಿರೋಧಿಗಳಾದ ವಿಪಕ್ಷ ನಾಯಕರಿಗೆ ಅರ್ಥವಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದಿಂದ ನಮಗೆ ₹1.87 ಲಕ್ಷ ಕೋಟಿ ನಷ್ಟವಾಗಿದೆ. ಆ ಹಣ ಬಂದರೆ ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿ ಮಾಡಬಹುದು ಎಂದರು.

ಗ್ಯಾರಂಟಿ ಯೋಜನೆಗಳನ್ನು ಒಪ್ಪಿರುವ ರಾಜ್ಯದ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಆರ್ಶೀವಾದ ಮಾಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಬುರುಡೆ ಬಿಡುತ್ತಿದ್ದಾರೆ. ಆದರೆ, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯಲಿದೆ. ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾಗಿ ಬಿಜೆಪಿ ಪರವಾಗಿಯೇ ಕೆಲಸ ಮಾಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಒಂದೇ ಒಂದು ವಿರೋಧ ಪಕ್ಷವಿದೆ ಎಂದು ಲೇವಡಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಸಿಎಂ, ಡಿಸಿಎಂ ಸ್ಪರ್ಧೆ ಮಾಡಲಿ ಎಂಬ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಸ್ಥಳೀಯವಾಗಿ ಯಾರಿಗೆ ಹೆಚ್ಚು ಒಲವು ಇರುವುದೋ ಅವರಿಗೆ ಲೋಕಸಭಾ ಟಿಕೆಟ್ ನೀಡಲಾಗುತ್ತದೆ ಎಂದರು.

ಸ್ಥಳೀಯರು ಯಾರ ಹೆಸರು ಹೇಳುತ್ತಾರೆ ಅವರಿಗೆ ಟಿಕೆಟ್ ಕೊಡುತ್ತೇವೆ. ಮಹದೇವಪ್ಪ ಅವರ ಹೆಸರು ಹೇಳಿದರೆ ಅವರಿಗೆ ಕೊಡುತ್ತೇವೆ. ಬೇರೆಯವರ ಹೆಸರು ಹೇಳಿದರೆ ಅವಕಿಗೆ ನೀಡುತ್ತೇವೆ. ಮೈಸೂರು ಲೋಕಸಭಾ ಕ್ಷೇತ್ರದಿಂದ ನಟ ಡಾಲಿ ಧನಂಜಯ್ ಸ್ಪರ್ಧೆ ಬಗ್ಗೆ ಯಾವುದೇ ನನಗೆ ಗೊತ್ತಿಲ್ಲ ಎಂದು ಸ್ವಷ್ಟಪಡಿಸಿದರು.

PREV

Recommended Stories

ಮಹಿಳೆಯ ವಿರುದ್ಧದ ಪೋಕ್ಸೋ ಕೇಸ್‌ ರದ್ದತಿಗೆ ಕೋರ್ಟ್‌ ನಕಾರ
ಧರ್ಮಸ್ಥಳ ಪ್ರಕರಣ ಕುರಿತು ಡಾ.ಪರಮೇಶ್ವರ್‌ ಉತ್ತರಕ್ಕೆ ವಿಪಕ್ಷ ಅಸಮಾಧಾನ