;Resize=(412,232))
ನವದೆಹಲಿ: ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಆ.24 ರಂದು ಕಾವೇರಿ ನೀರು ನಿಯಂತ್ರಣ ಸಮಿತಿ( ಸಿಡಬ್ಲ್ಯುಆರ್‌ಸಿ) ಸಭೆ ಹಾಗೂ ಆ.25ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ)ದ ಸಭೆ ನಿಗದಿಯಾಗಿದೆ.
ಈ ಸಂಬಂಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದ್ದು, ಕೃಷ್ಣರಾಜ ಸಾಗರ ಜಲಾಶಯದಲ್ಲಿ ಹಲವು ದಿನಗಳಿಂದ ನೀರಿನ ಒಳಹರಿವು ಪ್ರಮಾಣ ಶೇ.50ರಷ್ಟಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನಿತ್ಯ 15 ಸಾವಿರ ಕ್ಯುಸೆಕ್ ಕಾವೇರಿ ನೀರನ್ನು ಬಿಡಲು ಆಗುವುದಿಲ್ಲ. ಬರೀ 6 ಸಾವಿರ ಕ್ಯುಸೆಕ್ ನೀರು ಹರಿಸುತ್ತೇವೆ ಎಂದು ರಾಜ್ಯ ಸರ್ಕಾರ ಅರ್ಜಿಯಲ್ಲಿ ತಿಳಿಸಿದೆ.