ನನ್ನ ನಗು ನೋಡಿದ್ರೆ ನಿಮಗೆ ಏನನ್ನಿಸುತ್ತೆ ? : ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸದಲ್ಲಿ ವಿಜಯೇಂದ್ರ

KannadaprabhaNewsNetwork |  
Published : Jul 07, 2025, 01:33 AM ISTUpdated : Jul 07, 2025, 06:46 AM IST
7 | Kannada Prabha

ಸಾರಾಂಶ

‘ನನ್ನ ನಗು ಮುಖ ನೋಡಿದರೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತೇನೆ ಎಂದು ಅನ್ನಿಸುತ್ತಾ? ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸ ನನಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ಮೈಸೂರು :  ‘ನನ್ನ ನಗು ಮುಖ ನೋಡಿದರೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತೇನೆ ಎಂದು ಅನ್ನಿಸುತ್ತಾ? ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸ ನನಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತ ಪ್ರಶ್ನೆಗೆ ನಸುನಗುತ್ತಲೇ ಪ್ರತಿಕ್ರಿಯಿಸಿ, ‘ನನ್ನ ನಗು ಮುಖ ನೋಡಿದರೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತೇನೆ ಎಂದು ಅನ್ನಿಸುತ್ತಾ...? ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ’ ಎಂದು ಹೇಳಿದರು.ಪಕ್ಷ ಅಧಿಕಾರಕ್ಕೆ ಬರುವವರೆಗೂ ವಿರಮಿಸುವುದಿಲ್ಲ:

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಿ ಕೆಲಸ ಮಾಡಲು ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ತನಕವೂ ನಾನು ವಿರಮಿಸುವುದಿಲ್ಲ. ಎರಡು ವರ್ಷದಿಂದ ಕಾಂಗ್ರೆಸ್ ನಾಯಕರ ದರ್ಪ ಸಹಿಸಿಕೊಂಡು ಬಂದಿದ್ದೇವೆ. ಇವರ ಅಹಂಕಾರದ ವರ್ತನೆ ದೂರವಾಗುವ ದಿನ ಹತ್ತಿರವಿದೆ. ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿದ್ದೇವೆ. ಹಳೆಯ ಮೈಸೂರು ಭಾಗದಲ್ಲಿ ನಿರೀಕ್ಷಿತ ಸ್ಥಾನ ಗೆಲ್ಲುವುದಕ್ಕೆ ಸವಾಲು ಸ್ವೀಕರಿಸಬೇಕು ಎಂದರು.

ನನ್ನ ಕೆಲಸದ ಬಗ್ಗೆ  ವರಿಷ್ಠರಿಗೆ ತೃಪ್ತಿ ಇದೆ

ಕಳೆದ ಒಂದೂವರೆ ವರ್ಷದಿಂದ ಪಕ್ಷ ಸಂಘಟನೆಗೆ ನಾನು ಕೆಲಸ ಮಾಡಿದ್ದೇನೆ. ನನ್ನ ಹೋರಾಟದ ಬಗ್ಗೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿಯಿದೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ನನ್ನನ್ನೇ ಮುಂದುವರಿಸುವ ವಿಶ್ವಾಸ ನನಗಿದೆ. ಅಂತಿಮವಾಗಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ.

- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

  • ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸ ನನಗಿದೆ - ವಿಜಯೇಂದ್ರ,
  • ‘ನನ್ನ ನಗು ಮುಖ ನೋಡಿದರೆ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತೇನೆ ಎಂದು ಅನ್ನಿಸುತ್ತಾ?
  • ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ

PREV
Read more Articles on

Recommended Stories

ಎಸ್‌ಟಿ ತಟ್ಟೆಗೆ ಕುರುಬರ ಕೈ : ವಿ.ಎಸ್‌.ಉಗ್ರಪ್ಪ ಆಕ್ಷೇಪ
ನಾಯಕತ್ವ ಬದಲು ಗೊಂದಲಕ್ಕೆ ವರಿಷ್ಠರು ಬ್ರೇಕ್‌ ಒತ್ತಲಿ : ಸತೀಶ್‌