ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಬರೀ 9 ತಿಂಗಳಾಗಿವೆ. ಅಷ್ಟರಲ್ಲೇ 1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದೆ. ಹೀಗಾಗಿ, ಆರ್ಥಿಕ ದಿವಾಳಿತನ ಎದುರಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಹಿಂದೂಗಳ ದೇವಾಲಯಗಳ ಮೇಲೆ ಕಣ್ಣು ಹಾಕಿದೆ. ವಿಧಾನಸಭೆಯಲ್ಲಿ ಈ ಸಂಬಂಧ ಮಸೂದೆಯನ್ನು ಪಾಸು ಮಾಡಿಕೊಂಡಿದೆ.
ಆದರೆ, ವಿಧಾನಪರಿಷತ್‌ನಲ್ಲಿ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಲೇ ಈ ಯೋಚನೆಯನ್ನು ಕೈಬಿಡಬೇಕು. ಇಷ್ಟಾಗಿಯೂ ಏನಾದರೂ ಕಾನೂನು ಜಾರಿಗೊಳಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಧಾರವಾಡದಲ್ಲಿ ಬಿಜೆಪಿ ಐತಿಹಾಸಿಕ ಜಯ: ಇದಕ್ಕೂ ಮೊದಲು ಧಾರವಾಡದಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿ, ಧಾರವಾಡದಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸುತ್ತದೆ.
ಮೋದಿ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೇಲ್ಮನೆಯಲ್ಲಿ ಸೋಲಿಸಿದ್ದೇವೆ: ವಿಧಾನಪರಿಷತ್‌ನಲ್ಲಿ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಲೇ ಈ ಯೋಚನೆಯನ್ನು ಕೈಬಿಡಬೇಕು. ಇಷ್ಟಾಗಿಯೂ ಏನಾದರೂ ಕಾನೂನು ಜಾರಿಗೊಳಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ.- ಪ್ರಹ್ಲಾದ್ ಜೋಶಿ ಕೇಂದ್ರ ಸಚಿವ