ಕಾಂಗ್ರೆಸ್‌ ಬಿಟ್ಟು ಮತ್ತೆ ಬಿಜೆಪಿ ಸೇರಲ್ಲ: ಲಕ್ಷ್ಮಣ್‌ ಸವದಿ ಸ್ಪಷ್ಟನೆ

KannadaprabhaNewsNetwork |  
Published : Jan 26, 2024, 01:48 AM ISTUpdated : Jan 26, 2024, 07:22 AM IST
DK Lakshman | Kannada Prabha

ಸಾರಾಂಶ

ಕಾಂಗ್ರೆಸ್‌ ತೊರೆದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತ್ಯೇಕ ಚರ್ಚೆ ನಡೆಸಿದರು.

ಕನ್ನಡಪ್ರಭ ವಾರ್ತೆ, ಬೆಂಗಳೂರು

ಕಾಂಗ್ರೆಸ್‌ ತೊರೆದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತ್ಯೇಕ ಚರ್ಚೆ ನಡೆಸಿದರು.

ಶೆಟ್ಟರ್‌ ನಂತರ ಸವದಿ ಅವರ ಮುಂದಿನ ನಡೆಯ ಬಗ್ಗೆಯೂ ಚರ್ಚೆ ಆರಂಭವಾಗಿದ್ದ ಹಿನ್ನೆಲೆಯಲ್ಲಿ ಶಿವಕುಮಾರ್‌ ಅವರು ಸವದಿ ಜತೆ ಮಾತುಕತೆ ನಡೆಸಿದರು ಎನ್ನಲಾಗಿದೆ. ಶಿವಕುಮಾರ್‌ ಭೇಟಿ ಬಳಿಕ ಮಾತನಾಡಿದ ಸವದಿ, ಈಗಾಗಲೇ ಕಾಂಗ್ರೆಸ್‌ ಪಕ್ಷ ಬಿಡಲ್ಲ ಎಂದು ಹೇಳಿದ್ದೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಶೆಟ್ಟರ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್‌ ಯಾಕೆ ಹೋಗಿದ್ದಾರೆ ಎಂಬುದು ಗೊತ್ತಿಲ್ಲ. ಶೆಟ್ಟರ್‌ ಬಿಜೆಪಿಗೆ ಹೋಗಿರುವುದರಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯಲ್ಲೂ ಹಾನಿ ಆಗುವುದಿಲ್ಲ. 

ರಾಷ್ಟ್ರೀಯ ಪಕ್ಷಗಳು ಎಂದಿಗೂ ಒಬ್ಬರ ಮೇಲೆ ಅವಲಂಬಿತವಾಗಿರುವುದಿಲ್ಲ ಎಂದು ಅಭಿಪ್ರಾಯಪಟ್ಟರು.ವಿಧಾನಸಭೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರಿದ್ದರು.

ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಗದೀಶ್‌ ಶೆಟ್ಟರ್‌ ಸೋಲುಂಡರೆ, ಲಕ್ಷ್ಮಣ ಸವದಿ ಅವರು ಅಥಣಿ ಕ್ಷೇತ್ರದಲ್ಲಿ ಭಾರಿ ಅಂತರದಿಂದ ಜಯಗಳಿಸಿದ್ದರು.

ಸೋತ ಜಗದೀಶ್ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ಪರಿಷತ್‌ ಸದಸ್ಯರನ್ನಾಗಿ ಮಾಡಿತು. ಆದರೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಲಕ್ಷ್ಮಣ ಸವದಿ ಅವರಿಗೆ ಯಾವುದೇ ಸ್ಥಾನ ನೀಡಿಲ್ಲ. ಹೀಗಾಗಿ ಶೆಟ್ಟರ್‌ ಬೆನ್ನಲ್ಲೇ ಸವದಿ ಅವರ ಬಗ್ಗೆಯೂ ಘರ್‌ ವಾಪಸಿಯ ಮಾತುಗಳು ಕೇಳಿ ಬಂದಿದ್ದವು.

ಯಾರೂ ಕಾಂಗ್ರೆಸ್‌ ಬಿಡಲ್ಲ: ಡಿಕೆಶಿಶೆಟ್ಟರ್ ವಿಚಾರ ಬೇರೆ, ಬೇರೆಯವರ ವಿಚಾರವೇ ಬೇರೆ. ಇನ್ನು ಯಾರೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಕಾಂಗ್ರೆಸ್‌ನಿಂದ ಯಾರೂ ಬಿಜೆಪಿಗೆ ಹೋಗಲ್ಲ- ಡಿ.ಕೆ.ಶಿವಕುಮಾರ್‌, ಡಿಸಿಎಂ

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ