ಅಮಾನತುಗೊಂಡಿರುವ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಕುರಿತು ತೀರ್ಮಾನ ಮಾಡಲು ಮೇ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ ನಡೆಯಲಿದೆ
ಬೆಂಗಳೂರು: ಸದನದಿಂದ ಅಮಾನತುಗೊಂಡಿರುವ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಕುರಿತು ತೀರ್ಮಾನ ಮಾಡಲು ಮೇ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಅಮಾನತುಗೊಂಡ ಶಾಸಕರ ಬಗ್ಗೆ ಚರ್ಚಿಸಲಾಯಿತು. ಈ ವೇಳೆ ಶಾಸಕರ ಅಮಾನತು ಬಗ್ಗೆ ತೀರ್ಮಾನಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಮೇ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್, ಪ್ರತಿಪಕ್ಷ ನಾಯಕರು, ಕಾನೂನು ಮತ್ತು ಸಂಸದೀಯ ಸಚಿವರು ಎಲ್ಲರೂ ಸೇರಿ ಸೂಕ್ತ ನಿರ್ಧಾರ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.