ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ನಡುವಿನ 4 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.
ಮುಂಬೈ: ಭಾರತದ ತಾರಾ ಕ್ರಿಕೆಟಿಗ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ವರ್ಮಾ ನಡುವಿನ 4 ವರ್ಷಗಳ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಚಹಲ್ ಮತ್ತು ಧನಶ್ರೀ ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ವಿಚ್ಛೇದನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು ಎಂದು ವರದಿಯಾಗಿದೆ.
ನ್ಯಾಯಾಧೀಶರು ಕೆಲ ಹೊತ್ತು ದಂಪತಿಗೆ ಕೌನ್ಸೆಲಿಂಗ್ ನಡೆಸಿದ್ದು, ಈ ವೇಳೆ ಇಬ್ಬರೂ ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಕಳೆದ 18 ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಹೊಂದಾಣಿಕೆಯ ಸಮಸ್ಯೆಯಿಂದ ವಿಚ್ಛೇದನಕ್ಕೆ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಆದರೆ ಧನಶ್ರೀ ಜೀವನಾಂಶ ರೂಪದಲ್ಲಿ ಚಹಲ್‌ರಿಂದ ₹60 ಕೋಟಿ ಪಡೆದಿದ್ದಾರೆ ಎಂಬ ವರದಿಗಳು ಸುಳ್ಳು ಎಂಬುದು ಧನಶ್ರೀ ಕುಟುಂಬಸ್ಥರು ತಿಳಿಸಿದ್ದಾರೆ.