ಜ.15ರೊಳಗೆ ತಾಪಂ, ಜಿಪಂ ಚುನಾವಣೆ: ಖಂಡ್ರೆ

Published : Oct 08, 2026, 06:29 AM IST
Eshwar Khandre

ಸಾರಾಂಶ

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜನವರಿ 15ರ ಒಳಗೆ ಖಂಡಿತವಾಗಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ನೀಡಿದ್ದಾರೆ.

ಚಿಕ್ಕಮಗಳೂರು : ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜನವರಿ 15ರ ಒಳಗೆ ಖಂಡಿತವಾಗಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ನೀಡಿದ್ದಾರೆ.

ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ

ಚಿಕ್ಕಮಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ನಂತರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು. ಈ ಕುರಿತು ಸಂಪುಟ ಸಭೆಯಲ್ಲಿಯೂ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ

ಪ್ರಾಥಮಿಕ ಕರಡು ಅಧಿಸೂಚನೆ ಪ್ರಕಟಣೆ ಬಳಿಕ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುವುದು. ಆಕ್ಷೇಪಣೆಗಳ ಪರಿಶೀಲನೆ ನಂತರ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚುನಾವಣೆ ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದಾಗಿದೆ. ಪ್ರಸ್ತುತ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿ ನೀಡುವಲ್ಲಿ ವಿಳಂಬವಾದರೆ, ಚುನಾವಣೆಗಳು ಜನವರಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಕೆಎಸ್‌ಆರ್‌ಟಿಸಿ ದರ ಶೇ.15 ಹೆಚ್ಚಳಕ್ಕೆ ಸರ್ಕಾರ ಒಲವು
ಸಚಿವರ ಸ್ಟಿಂಗ್ ಆಪರೇಷನ್ ಮಾಡಲು 2 ಖಾಸಗಿ ಟೀಂ ಕಾರ್ಯಾಚರಣೆ : ಡಿ.ಕೆ.ಶಿವಕುಮಾರ್