ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿಯು ಶಿಶು ವಿಹಾರ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಸೇರಿದಂತೆ ಒಟ್ಟು 163 ಶಾಲೆ-ಕಾಲೇಜುಗಳನ್ನು ನಡೆಸುತ್ತಿದೆ. ಕಳೆದ ತಿಂಗಳು ಶಿವಾಜಿನಗರ ಭಾರತಿನಗರದ ಪಾಲಿಕೆಯ ಶಿಶುವಿಹಾರ ಕಟ್ಟಡ ರಾತ್ರೋರಾತ್ರಿ ಕುಸಿದು ಬಿದ್ದಿತ್ತು. ರಾತ್ರಿ ವೇಳೆ ಕಟ್ಟಡ ಕುಸಿತ ಪರಿಣಾಮ ಯಾವುದೇ ಅನಾಹುತ ಉಂಟಾಗಿರಲಿಲ್ಲ. ಈ ಘಟನೆಯಿಂದ ಎಚ್ಚೆತ್ತುಕೊಂಡ ಬಿಬಿಎಂಪಿಯು ತನ್ನ ಎಲ್ಲಾ ಶಾಲಾ ಕಾಲೇಜು ಕಟ್ಟಡಗಳ ಸದೃಢತೆ ಪರಿಶೀಲನೆಗೆ ವರದಿ ನೀಡುವಂತೆ ಎಂಜಿನಿಯರ್ ಗಳಿಗೆ ಸೂಚನೆ ನೀಡಲಾಗುತ್ತು.
ಇದೀಗ ಎಂಜಿನಿಯರ್‌ಗಳು ಎಲ್ಲಾ ಶಾಲೆ-ಕಾಲೇಜು ಕಟ್ಟಡಗಳ ಪರಿಶೀಲನೆ ನಡೆಸಿದ್ದಾರೆ. ಈ ಪೈಕಿ 73 ಶಾಲೆ, ಕಾಲೇಜು ಕಟ್ಟಡಗಳು ಸುರಕ್ಷಿತವಾಗಿವೆ. 67 ಶಾಲೆ-ಕಾಲೇಜು ಕಟ್ಟಡಗಳನ್ನು ದುರಸ್ಥಿಗೊಳಿಸಬೇಕಿದೆ. ಉಳಿದ 19 ಶಾಲೆಗಳ ಕಟ್ಟಡ ಸಂಪೂರ್ಣವಾಗಿ ನೆಲಸಮಗೊಳಿಸಿ ಮರು ನಿರ್ಮಾಣ ಮಾಡಬೇಕಿದೆ. ಈ ಪೈಕಿ ಕೆಲವು ಕಟ್ಟಡಗಳನ್ನು ಈಗಾಗಲೇ ತೆರವು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಪೂರ್ವ ವಲಯದ 12, ಪಶ್ಚಿಮ ವಲಯದ 6, ದಕ್ಷಿಣ ವಲಯದ 1 ಶಾಲೆಯ ಕಟ್ಟಡದ ಶಿಥಿಲಾವಸ್ಥೆಯಲ್ಲಿದ್ದು, ಹೊಸ ಕಟ್ಟಡಬೇಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.ಬಾಕ್ಸ್...
ಪರಿಶೀಲನೆ ವರದಿಯಲ್ಲಿ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ಪ್ರಮುಖ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಚಾವಣಿಯಲ್ಲಿ ಕಬ್ಬಿಣದ ಸರಳು ಹೊರ ಬಂದ ಸ್ಥಿತಿಯಲ್ಲಿವೆ. ಈ ಕಟ್ಟಡದಲ್ಲಿ ಶಾಲೆ ಮುಂದುವರೆಸುವುದು ಮಕ್ಕಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
-ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ. ಬಿಬಿಎಂಪಿ.