ಕೈಗೆಟಕುವ ದರದಲ್ಲಿ ವಿದ್ಯುತ್ ಪೂರೈಕೆ : ಜಾರ್ಜ್

Published : Apr 20, 2026, 07:39 AM IST
KJ George

ಸಾರಾಂಶ

ನವೀಕರಿಸಬಹುದಾದ ಇಂಧನ ಉತ್ಪಾದನೆ, ಸಂಗ್ರಹಣೆಗೆ ಸೂಕ್ತ ವ್ಯವಸ್ಥೆ ಮತ್ತು ಮೂಲಸೌಕರ್ಯ ಬಲವರ್ಧನೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಮುಖ್ಯವಾಗಿ ಕೈಗೆಟಕುವ ದರದಲ್ಲಿ ಗುಣಮಟ್ಟದ ವಿದ್ಯುತ್‌ ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದೆ-ಜಾರ್ಜ್

 ಬೆಂಗಳೂರು :  ನವೀಕರಿಸಬಹುದಾದ ಇಂಧನ ಉತ್ಪಾದನೆ, ಸಂಗ್ರಹಣೆಗೆ ಸೂಕ್ತ ವ್ಯವಸ್ಥೆ ಮತ್ತು ಮೂಲಸೌಕರ್ಯ ಬಲವರ್ಧನೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಮುಖ್ಯವಾಗಿ ಕೈಗೆಟಕುವ ದರದಲ್ಲಿ ಗುಣಮಟ್ಟದ ವಿದ್ಯುತ್‌ ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಕಾಮನ್‌ವೆಲ್ತ್ ಲೀಗಲ್‌ ಎಜುಕೇಷನ್‌ ಅಸೋಸಿಯೇಷನ್‌ ಮತ್ತು ಇಂಧನ ಇಲಾಖೆ ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ’ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿ ಮಾತನಾಡಿದರು.

ಸಾಂಪ್ರದಾಯಿಕ ಮೂಲಗಳಿಂದ ನವೀಕರಿಸಬಹುದಾದ ಮೂಲಗಳಿಗೆ ಇಂಧನ ಪರಿವರ್ತನೆಯು ಮಹತ್ವಾಕಾಂಕ್ಷೆಯಾಗಿ ಉಳಿಯದೇ, ಅನುಷ್ಠಾನಕ್ಕೆ ಸಂಘಟಿತ ಕ್ರಮವಹಿಸಬೇಕಿದೆ ಎಂದು ಹೇಳಿದರು.

ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ ಸಮ್ಮೇಳನ ವೇದಿಕೆಯಾಗಿದ್ದು, ಸುಸ್ಥಿರ ಇಂಧನ ಭವಿಷ್ಯವನ್ನು ರೂಪಿಸುವಲ್ಲಿ ಈ ಸಮ್ಮೇಳನದ ನಿರ್ಣಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮಹತ್ವದ ಬದಲಾವಣೆಗೆ ಕಾರಣ

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್ ಮಾತನಾಡಿ, ಈ ಸಮ್ಮೇಳನದ ನಿರ್ಣಯಗಳು ನವೀಕರಿಸಬಹುದಾದ ಇಂಧನ ವಲಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿವೆ. ಇಂಧನ ನೀತಿಯನ್ನು ರೂಪಿಸುವಲ್ಲಿ ನ್ಯಾಯಾಂಗದ ಪಾತ್ರ ನಿರ್ಣಾಯಕವಾಗಿದ್ದು, ಈ ಸಮ್ಮೇಳನವು ಸೂಕ್ತ ವೇದಿಕೆಯನ್ನು ಒದಗಿಸಿದೆ ಎಂದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್. ಶಿವಶಂಕರ್, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಸೇರಿದಂತೆ ಹಲವರು ಹಾಜರಿದ್ದರು.

ಸಮ್ಮೇಳನವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಅರ್ಥಪೂರ್ಣ ಸಂವಾದಕ್ಕೆ ವೇದಿಕೆ ಕಲ್ಪಿಸಿತು. ಭಾರತದ ಇಂಧನ ಪರಿವರ್ತನೆಗೆ ಸಾಂಸ್ಥಿಕ ಸಹಯೋಗವು ನಿರ್ಣಾಯಕ.

- ಡಾ.ಶಾಲಿನಿ ರಜನೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ

PREV
Read more Articles on

Recommended Stories

ಮರುವಿಂಗಡಣೆಯಿಂದ ಬಿಜೆಪಿಗೆ ಅನುಕೂಲ ಎಂಬುದು ಸುಳ್ಳು
ಸ್ವಾರ್ಥ, ಅಪಸ್ವರವಿಲ್ಲದೆ ಮಹಿಳಾ ಮೀಸಲಾತಿ ಜಾರಿಯಾಗಲಿ