ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ವಾರ್ಡ್‌ ವಾರು ನೋಡಲ್‌ ಅಧಿಕಾರಿ ನೇಮಕ

KannadaprabhaNewsNetwork |  
Published : Nov 29, 2024, 01:32 AM ISTUpdated : Nov 29, 2024, 06:50 AM IST
ತುಷಾರ್‌  | Kannada Prabha

ಸಾರಾಂಶ

ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

 ಬೆಂಗಳೂರು :  ನಗರದ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪರಿಹರಿಸಲು ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.

ಉಪ ಮುಖ್ಯಮಂತ್ರಿ ಸೂಚನೆಯ ಮೇರೆಗೆ ಈ ನೇಮಕ ಮಾಡಲಾಗಿದ್ದು, ನೇಮಕಗೊಂಡ ಅಧಿಕಾರಿಗಳು ತಮಗೆ ನಿಯೋಜಿಸಿರುವ ವಾರ್ಡ್‌ಗಳಲ್ಲಿ ಕಡ್ಡಾಯವಾಗಿ ಪ್ರತಿ ಬುಧವಾರ ಇಡೀ ದಿನ ಕಚೇರಿಯ ಅವಧಿಯಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆ ಆಲಿಸಿ ಇತ್ಯರ್ಥಪಡಿಸಬೇಕು. ಬುಧವಾರದ ಸಭೆ ಕುರಿತು ಸಾರ್ವಜನಿಕರಿಗೆ ಸೂಕ್ತ ಪ್ರಚಾರ ನೀಡಬೇಕು. ಜತೆಗೆ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ವಾರ್ಡ್ ಹಂತದಲ್ಲಿಯೇ ಪರಿಹರಿಸಬೇಕು.ವಾರ್ಡ್ ಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ವಲಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ನೋಡಲ್ ಅಧಿಕಾರಿಗಳು ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕೆಂದು ನಿರ್ದೇಶಿಸಲಾಗಿದೆ.

ವಿಧಾನಸಭಾವಾರು ಮೇಲಾಧಿಕಾರಿ ನೇಮಕ: ಬಿಬಿಎಂಪಿಯ 28 ವಿಧಾನಸಭಾ ಕ್ಷೇತ್ರವಾರು ನೇಮಕಗೊಂಡಿರುವ ಮೇಲಾಧಿಕಾರಿಗಳು ವಾರ್ಡ್‌ನ ನೋಡಲ್‌ ಅಧಿಕಾರಿಯ ಕಾರ್ಯವನ್ನು ಪರಿಶೀಲಿಸಬೇಕು. ವಲಯ ಆಯುಕ್ತರು ವೇಳಾಪಟ್ಟಿ ಸಿದ್ದಪಡಿಸಿಕೊಂಡು ಪ್ರತಿ ಬುಧವಾರ ತಮ್ಮ ವಲಯದ ವಾರ್ಡ್‌ಗಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ವೆಬ್ ಸೈಟ್‌ನಲ್ಲಿ ಅಧಿಕಾರಿಗಳ ಪಟ್ಟಿ: ವಾರ್ಡ್ ಗಳಿಗೆ ನೋಡಲ್ ಅಧಿಕಾರಿ ನಿಯೋಜನೆಯಾದ ಅಧಿಕಾರಿಯ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯ ಪಟ್ಟಿಯನ್ನು ಪಾಲಿಕೆಯ ವೆಬ್ ಸೈಟ್ bbmp.gov.in/home ನಲ್ಲಿ ವೀಕ್ಷಣೆ ಮಾಡಬಹುದಾಗಿದೆ. ನೋಡಲ್‌ ಅಧಿಕಾರಿಗಳು ಪ್ರಮುಖವಾಗಿ ಕಸ ವಿಲೇವಾರಿ, ಸಾರ್ವಜನಿಕ ಕಾಮಗಾರಿ (ರಸ್ತೆ, ಚರಂಡಿ, ಇತ್ಯಾದಿ), ಕುಂದುಕೊರತೆ ಹಾಗೂ ಸಾರ್ವಜನಿಕರ ದೂರುಗಳು ಬಗ್ಗೆ ಹೆಚ್ಚಿನ ಗಮನ ನೀಡಬೇಕು.

PREV

Recommended Stories

ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ಬೆಂಗಳೂರು ಬೀದಿನಾಯಿಗಳಿಗೆ ಈಗ ಪೊಲೀಸ್‌ ಶ್ವಾನಗಳ ರೀತಿ ಟ್ರೈನಿಂಗ್ ಭಾಗ್ಯ !