ಡೆಂಘೀ ರೋಗ ಹರಡದಂತೆ ಜಾಗೃತೆ ವಹಿಸಿ: ಎಸ್ .ಡಿ.ಬೆನ್ನೂರ

KannadaprabhaNewsNetwork |  
Published : Dec 10, 2023, 01:30 AM IST
9ಕೆಎಂಎನ್ ಡಿ21ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಘೀ ಜ್ವರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅರಿವಿನ ಕಾರ್ಯಕ್ರಮದಲ್ಲಿ  ಎಸ್.ಡಿ.ಬೆನ್ನೂರ ಮಾತನಾಡಿದರು. | Kannada Prabha

ಸಾರಾಂಶ

ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಜಾಗೃತಿ ವಹಿಸಿ ಡೆಂಘೀ ರೋಗ ಹರಡದಂತೆ ತಡೆಗಟ್ಟಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.ತಾಲೂಕಿನ ದೊಡ್ಡಪಾಳ್ಯ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಅರಕೆರೆ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಡೆಂಘೀ ಜ್ವರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅರಿವಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೊಡ್ಡಪಾಳ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಘೀ ಜ್ವರ ನಿಯಂತ್ರಣದ ಅರಿವು ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಜಾಗೃತಿ ವಹಿಸಿ ಡೆಂಘೀ ರೋಗ ಹರಡದಂತೆ ತಡೆಗಟ್ಟಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಹೇಳಿದರು.

ತಾಲೂಕಿನ ದೊಡ್ಡಪಾಳ್ಯ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಅರಕೆರೆ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಆಯೋಜಿಸಿದ್ದ ಡೆಂಘೀ ಜ್ವರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅರಿವಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿರ್ದಿಷ್ಟ ಚಿಕಿತ್ಸೆ ಇಲ್ಲದ ಡೆಂಘೀ ಜ್ವರಕ್ಕೆ ಮುಂಜಾಗ್ರತೆಯೇ ಪರಮೌಷಧಿ. ಡೆಂಘೀ ಹಾಗೂ ಚಿಕನ್ ಗುನ್ಯಾ ಜ್ವರಗಳು ಸೊಳ್ಳೆ ಕಡಿತದಿಂದ ಬರುತ್ತವೆ. ಹಠಾತ್ತನೇ ಬರುವ ಅಧಿಕ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ವಾಕರಿಕೆ ಮತ್ತು ವಾಂತಿ ರೊಗದ ಲಕ್ಷಣಗಳಾಗಿವೆ. ರೋಗದ ಲಕ್ಷಣ ಕಂಡುಬಂದಾಗ ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷಿಸಿಕೊಳ್ಳುವ ಜೊತೆಗೆ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ಸೊಳ್ಳೆಗಳು ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ ಎಂದು ವಿದ್ಯಾರ್ಥಿಗಳಿಗೆ ಸೊಳ್ಳೆಗಳ ಬೆಳವಣಿಗೆ ಹಂತಗಳ ಲಾರ್ವಾ ಪ್ರಾತ್ಯಕ್ಷಿಕೆಯೊಂದಿಗೆ ಹಾಗೂ ಭಿತ್ತಿ ಪತ್ರಗಳೊಂದಿಗೆ ಜಾಗೃತಿ ಮೂಡಿಸಿ ತಪ್ಪದೇ ವಾರಕ್ಕೊಂದು ದಿನ ವಣ ದಿನ ಆಚರಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಶಾಲಾ ಶಿಕ್ಷಕರಾದ ಸುರೇಶ್, ಶ್ರೀಕಾಂತ, ಗೋವಿಂದಯ್ಯ, ಭಾಸ್ಕರ, ರೇಣುಕಾದೇವಿ, ದೈಹಿಕ ಶಿಕ್ಷಕಿ ಮಂಜುಳಾದೇವಿ, ಸಮುದಾಯ ಆರೋಗ್ಯ ಅಧಿಕಾರಿ ರೂಪಾ, ಆಶಾ ಕಾರ್ಯಕರ್ತೆ ಗೀತಾ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

-----

ದೊಡ್ಡಪಾಳ್ಯ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಘೀ ಜ್ವರ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತು ಅರಿವಿನ ಕಾರ್ಯಕ್ರಮದಲ್ಲಿ ಎಸ್.ಡಿ.ಬೆನ್ನೂರ ಮಾತನಾಡಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ