ಬಂಗಾಳಕೊಲ್ಲೀಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಎರಡು ದಿನದಲ್ಲಿ ಮಳೆ ಕ್ಷೀಣ

KannadaprabhaNewsNetwork |  
Published : May 30, 2025, 12:41 AM ISTUpdated : May 30, 2025, 05:02 AM IST
Madhya Pradesh rain 2025

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಮುಂಗಾರು ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಎರಡು ದಿನದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಮುಂಗಾರು ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಎರಡು ದಿನದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಒಂದೆರಡು ದಿನ ಮಳೆ ಅಬ್ಬರಿಸಲಿರುವುದರಿಂದ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ಮೇ 31ರ ವರೆಗೆ ನೀಡಲಾಗಿದೆ. ಮೇ 30ಕ್ಕೆ ಕೊಡಗು ಜಿಲ್ಲೆಗೆ ಮಾತ್ರ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಅಲ್ಲಲ್ಲಿ ಮಳೆ ಆಗಲಿದೆ. ವ್ಯಾಪಕವಾಗಿ ಮಳೆ ಆಗುವುದಿಲ್ಲ ಎಂದು ತಿಳಿಸಿದೆ. ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ ಪ್ರಕಾರ, ಉ.ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು 14 ಸೆಂ.ಮೀ. ಮಳೆಯಾಗಿದೆ. ಉಪ್ಪಿನಂಗಡಿ, ಭಾಗಮಂಡಲದಲ್ಲಿ ತಲಾ 13 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಗೇರುಸೊಪ್ಪ 11, ಬಂಟ್ವಾಳ, ಪುತ್ತೂರು, ಮಾಣಿ, ಹೊನ್ನಾವರ, ಅಂಕೋಲಾದಲ್ಲಿ ತಲಾ 10, ಕುಂದಾಪುರ, ಪಣಂಬೂರು, ಸಿದ್ದಾಪುರ, ಉಡುಪಿ, ಕೋಟಾ, ಕುಮಟಾ, ಮೂಡಬಿದಿರೆಯಲ್ಲಿ ತಲಾ 9, ಕೊಟ್ಟಿಗೆಹಾರ, ಸೋಮವಾರಪೇಟೆ, ಕಮ್ಮರಡಿ, ಸುಳ್ಯ, ಕಾರ್ಕಳ, ಗೋಕರ್ಣ, ಕದ್ರಾ, ಮಂಗಳೂರು ವಿಮಾನ ನಿಲ್ದಾಣದಲ್ಲಿ ತಲಾ 7 ಸೆಂ.ಮೀ.

PREV
Read more Articles on

Recommended Stories

ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಡಬಲ್ ವಾಲ್ವ್ ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಅಪೋಲೋ
ಭಗವದ್ಗೀತೆ ಬೋಧನೆ ಪ್ರಸ್ತಾಪ ಹಿಂದೆ ಎಚ್ಜಿಕೆ ಅಜೆಂಡಾ : ಮಧು ಬಂಗಾರಪ್ಪ