ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಗಣರಾಜ್ಯೋತ್ಸವಕ್ಕೆ ಪೂರ್ವಭಾವಿಯಾಗಿ ಜ. 22ರಿಂದ 24ರವರೆಗೆ ತಾಲೀಮು ಮಾಡಲಾಗಿದೆ. ಜ. 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಂತರ ರಾಜ್ಯದ ಜನರಿಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ನಂತರ ಪಥ ಸಂಚಲನ ನಡೆಯಲಿದೆ ಎಂದರು.
ಕಾರ್ಯಕ್ರಮ ವೀಕ್ಷಿಸಲು ಸುಮಾರು 10 ಸಾವಿರಕ್ಕೂ ಹೆಚ್ಚಿನ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ ಅತಿಗಣ್ಯರಿಗೆ ಮೂರು ಸಾವಿರ, ಆಡಳಿತಾಧಿಕಾರಿಗಳು, ಮಾಧ್ಯಮದವರಿಗೆ 3,200, ಸಾರ್ವಜನಿಕರಿಗೆ ನಾಲ್ಕು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.ಈ ಬಾರಿಯ ಕವಾಯತಿನಲ್ಲಿ ತಮಿಳುನಾಡಿನ ಪೊಲೀಸ್ ತಂಡ ಸೇರಿದಂತೆ ಭಾರತೀಯ ಸೇನೆ, ವಾಯು ಸೇನೆ, ಸಿಆರ್‌ಪಿಎಫ್, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಎನ್‌ಸಿಸಿ, ಸೇವಾದಳ ಮತ್ತು ವಿವಿಧ ಶಾಲೆಗಳ ತಂಡಗಳು ಸೇರಿದಂತೆ ಒಟ್ಟು 30 ತುಕಡಿಗಳ ಒಂದು ಸಾವಿರಕ್ಕೂ ಹೆಚ್ಚಿನವರು ಕವಾಯತಿನಲ್ಲಿ ಭಾಗವಹಿಸಲಿದ್ದಾರೆ. ಉಳಿದಂತೆ ಏಳು ಬ್ಯಾಂಡ್ ತಂಡಗಳು ಪಾಲ್ಗೊಳ್ಳಲಿವೆ ಎಂದು ಹೇಳಿದರು.
ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮದಂದು ಭದ್ರತೆಗಾಗಿ ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲು 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಒದಗಿಸಲಾಗುತ್ತಿದೆ ಗಣ್ಯರ ಓಡಾಟ ಹೆಚ್ಚಿರುವ ಕಾರಣದಿಂದಾಗಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 8.30ರಿಂದ 10-30ರವರೆಗೆ ಕಬ್ಬನ್ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗಿನ ಎರಡೂ ದಿಕ್ಕುಗಳಲ್ಲೂ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದರು.
----
ಬೈಕ್ ಸಾಹಸ ಪ್ರದರ್ಶನ ಇಲ್ಲ
ಬಾಕ್ಸ್.. ಇ-ಪಾಸ್ ವ್ಯವಸ್ಥೆ
----
ಗೇಟ್ 3: ಸಿಎಂ,ಡಿಸಿಎಂ, ಸಿಎಸ್, ಡಿಜಿ. ಐಜಿ, ರಕ್ಷಣಾ ಇಲಾಖೆ ಹಿರಿ ಅಧಿಕಾರಿಗಳು
ಗೇಟ್ 4: ಆಡಳಿತಾಧಿಕಾರಿಗಳು, ಮಾಧ್ಯಮದವರುಗೇಟ್ 5: ಸಾರ್ವಜನಿಕರು
-----ಫೋಟೋಗಳು...1..ಸುದ್ದಿಗೋಷ್ಠಿಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನಗರ ಜಿಲ್ಲಾಧಿಕಾರಿ ಜಿ. ಜಗದೀಶ್.