ಜಕ್ಕೂರು ರೈಲ್ವೆ ಹಳಿಗೆ ಸಮಾಂತರ ರಸ್ತೆ ನಿರ್ಮಿಸಿ : ಸುನೀಲ ಕುಮಾರ್‌ ಸೂಚನೆ

KannadaprabhaNewsNetwork |  
Published : Sep 09, 2025, 02:00 AM IST
Railway 1 | Kannada Prabha

ಸಾರಾಂಶ

ಜಕ್ಕೂರು ರೈಲ್ವೆ ಹಳಿ ಮಾರ್ಗಕ್ಕೆ ಸಮಾನಾಂತರವಾಗಿ ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಬೆಂಗಳೂರು :  ಜಕ್ಕೂರು ರೈಲ್ವೆ ಹಳಿ ಮಾರ್ಗಕ್ಕೆ ಸಮಾನಾಂತರವಾಗಿ ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ಜಕ್ಕೂರು ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಅವರು, ಜಕ್ಕೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಜಕ್ಕೂರು ರೈಲ್ವೆ ಹಳಿಗೆ ಬಳ್ಳಾರಿ ರಸ್ತೆ ಸಂಪರ್ಕಿಸುವ ಸಮಾನಾಂತರ ರಸ್ತೆ ಪರಿಶೀಲಿಸಿ, ಹೊಸ ರಸ್ತೆಯ ನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಿ ಕಾಮಗಾರಿ ಪ್ರಾರಂಭಿಸಬೇಕು. ರಾಯಲ್ ಎನ್‌ಕ್ಲೇವ್ ಲೇಔಟ್‌ನಲ್ಲಿ ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಪ್ರತಿನಿತ್ಯ ಆಟೋ ಟಿಪ್ಪರ್ ಗಳನ್ನು ಮನೆ-ಮನೆಗೆ ಭೇಟಿ ನೀಡಿ ಕಸ ಸಂಗ್ರಹಿಸಲು ಸೂಚಿಸಿದರು.

ಈ ವೇಳೆ ಜಂಟಿ ಆಯುಕ್ತ ಮೊಹ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಎಂಜಿನಿಯರ್‌ಗಳಾದ ಸುಧಾಕರ್, ನಾಗಪ್ಪ ಉಪಸ್ಥಿತರಿದ್ದರು.

₹1.5 ಲಕ್ಷ ದಂಡ:

ದಾಸರಹಳ್ಳಿಯ ಭೈರವವೇಶ್ವರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗೋದಾಮ ಮೇಲೆ ದಾಳಿ ನಡೆಸಿದ ಜಿಬಿಎ ಅಧಿಕಾರಿಗಳು 3.5 ಟನ್ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡು ₹1.5 ಲಕ್ಷ ದಂಡ ವಿಧಿಸಿದ್ದಾರೆ.

PREV
Read more Articles on

Recommended Stories

ದಾವಣಗೆರೆಯ ಶೈಕ್ಷಣಿಕ ಪುನರುಜ್ಜೀವನದ ಶಿಲ್ಪಿ ಶಾಮನೂರು
‘ಹೇಟ್‌’ಬುಕ್‌ ಕಮೆಂಟ್‌ಗಳಿಗೆ ದ್ವೇಷದ ಬಿಲ್‌ ಕಡಿವಾಣ?