ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ

KannadaprabhaNewsNetwork |  
Published : Dec 21, 2023, 01:15 AM IST
66 | Kannada Prabha

ಸಾರಾಂಶ

ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆನಂಜನಗೂಡು ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಿದ್ದೇಗೌಡ ಲೇಔಟ್ ನಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಿದ್ದೇಗೌಡ ಲೇಔಟ್ ನಲ್ಲಿ ನಡೆದಿದೆ. ಶಬರೀಶ್ (35) ಮೃತ ದುರ್ದೈವಿ. ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್ ನಲ್ಲಿ ಟ್ರೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಬರೀಶ್ ಬುಧವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಶಬರೀಶ್ ಸಾವಿಗೆ ಯಾರೂ ಕಾರಣರಲ್ಲ ಎಂದು ಪತ್ನಿ ಮೇಘ ಪೊಲೀಸರಿಗೆ ದೂರು ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ಶೂನ್ಯ ಸಂಪಾದನೆಯ ವರ್ಷದಲ್ಲಿ ಐದು ಐತಿಹಾಸಿಕ ಸಂಗತಿಗಳು
ಜಿ-ರಾಮ್‌ಜಿಯಿಂದ ದುರ್ಬಲರ ಹಕ್ಕಿಗೆ ಕುತ್ತು: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ