ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ

KannadaprabhaNewsNetwork |  
Published : Dec 19, 2023, 01:45 AM IST
42 | Kannada Prabha

ಸಾರಾಂಶ

ಹೆಣ್ಣು ಭ್ರೂಣ ಹತ್ಯೆ ತಲೆ ತಗ್ಗಿಸುವ ಕೃತ್ಯ, ಮೈಸೂರುಸಾಹಿತಿ ಬನ್ನೂರು ಕೆ.ರಾಜುನಾಗರಿಕ ಸಮಾಜದಲ್ಲಿ ಅನಾಗರಿಕವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಂದ ಇಡೀ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪತ್ರಕರ್ತರೂ ಆದ, ಸಾಹಿತಿ ಬನ್ನೂರು

ಕನ್ನಡಪ್ರಭ ವಾರ್ತೆ ಮೈಸೂರು

ನಾಗರಿಕ ಸಮಾಜದಲ್ಲಿ ಅನಾಗರಿಕವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಂದ ಇಡೀ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ ಎಂದು ಪತ್ರಕರ್ತರೂ ಆದ, ಸಾಹಿತಿ ಬನ್ನೂರು ಕೆ.ರಾಜು ಹೇಳಿದರು.

ನಗರದ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದಿಂದ ನಡೆದ ಹೆಣ್ಣು ಭ್ರೂಣ ಹತ್ಯೆ- ಒಂದು ಚಿಂತನೆ ಮತ್ತು ಬಾಲ ಕಿಶೋರಿ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶ್ರೀ ಬಸೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಭ್ರೂಣ ಹತ್ಯೆಯನ್ನು ಸರ್ಕಾರ ಕಾನೂನಾತ್ಮಕವಾಗಿ ಎಷ್ಟೇ ನಿಯಂತ್ರಣ ಮಾಡಿದರೂ ಸಾಧ್ಯವಾಗದ ಪರಿಸ್ಥಿತಿ ನಮ್ಮಲ್ಲಿ ಇರುವುದರಿಂದ ಇಡೀ ಸಮಾಜ ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ದನಿಯೆತ್ತಿ ಸ್ವಯಂ ಜಾಗೃತಿಗೊಳ್ಳಬೇಕೆಂದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಕವಿ ಜಯಪ್ಪ ಹೊನ್ನಾಳಿ ಅವರು, ಹೆಣ್ಣನ್ನು ಪೂಜಿಸುವ ನಾಡಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಮನುಕುಲಕ್ಕೆ ನಾಚಿಕೆಗೇಡಿನ ಸಂಗತಿ. ಹೆಣ್ಣನ್ನು ತೋರಿಕೆಗೆ ದೇವತೆ ಮಾಡಿ ಪೂಜನೀಯ ಸ್ಥಾನ ನೀಡಿ ನಿರಂತರವಾಗಿ ಶೋಷಿಸಿ ಕೊಲೆ ಮಾಡಲಾಗುತ್ತಿದೆ ಎಂದರು

ನಗರ ಪಾಲಿಕೆ ಸದಸ್ಯೆ ಶೋಭಾ ಸುನಿಲ್, ಅಥರ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಿಇಒ ಪಿ. ಪುಷ್ಪಲತಾ ಕಾರ್ಯಕ್ರಮ ಕುರಿತು ಮಾತನಾಡಿದರು. ಇದೇ ವೇಳೆ ಪ್ರತಿಭಾವಂತ ಸಾಧಕ ಮಕ್ಕಳಾದ ನಿಯತಿ ವಿಜಯ್ ಕುಮಾರ್, ತನ್ವಿ ಯೋಗೀಶ್ ಹಾಗು ಮಹತಿ ವಿಜಯ್ ಕುಮಾರ್ ಅವರಿಗೆ ಬಾಲ ಕಿಶೋರಿ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಮಾಲಂಗಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ನಗರ ಪಾಲಿಕೆ ಮಾಜಿ ಸದಸ್ಯ ಸುನಿಲ್, ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಬಸವ ರಾಜೇಂದ್ರ ಸ್ವಾಮೀಜಿ ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ