- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸ್ಪಷ್ಟನೆ
ಸಂಸದ ಪ್ರತಾಪಸಿಂಹ ಭಯೋತ್ಪಾದಕ ಎಂಬ ಹೇಳಿಕೆಯು ಕಾಂಗ್ರೆಸ್ ಪಕ್ಷದಲ್ಲ. ಉಗ್ರ ವೇಷದಲ್ಲಿ ಬಿಂಬಿಸಿರುವುದಕ್ಕೂ- ಕಾಂಗ್ರೆಸ್ಗೂ ಸಂಬಂಧ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸ್ಪಷ್ಟಪಡಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಾಪ ಸಿಂಹ ಪ್ರಚೋದಿಸುತ್ತಾರೆ ಎಂದು ಟೀಕಿಸಿದ್ದೇವೆಯೇ ಹೊರತು ಭಯೋತ್ಪಾದಕ ಎಂದಿಲ್ಲ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಾಪಸಿಂಹ ಅವರನ್ನು ಕೈಯಲ್ಲಿ ಬಾಂಬ್ ಕೊಟ್ಟು ದೇಶದ್ರೋಹಿ, ಭಯೋತ್ಪಾದಕ ಎಂದೆಲ್ಲಾ ಬರೆಯಲಾಗಿತ್ತು. ಈ ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿರೋಧಿ ಎಂದೆಲ್ಲಾ ಬಿಜೆಪಿಯವರು ಅಪ್ರಪಚಾರ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಎಂದೂ ಮುಸ್ಲಿಂ ವಿರೋಧಿಯಲ್ಲ. ಇದೇ ವಿಚಾರವಾಗಿ ಒಕ್ಕಲಿಗರ ಸಂಘದ ನಿರ್ದೇಶಕರು ಕಾಂಗ್ರೆಸ್ ಅನ್ನು ಟೀಕಿಸುತ್ತಿದ್ದಾರೆ ಎಂದರು.ಪ್ರತಿಭಟನೆ ನಡೆಸಿದ ವೇದಿಕೆ ಕೆ.ಎಸ್. ಶಿವರಾಮ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆ ಹಿಂದೆ, ಮುಂದೆ ನಿಂತಿರುತ್ತಾರೆ. ಅವರು ಕಾಂಗ್ರೆಸ್ ಪಕ್ಷದ ಸದಸ್ಯರೂ ಅಲ್ಲ. ನಮಗೂ ಅದಕ್ಕೂ ಸಂಬಂಧ ಇಲ್ಲ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರನನ್ನು ಗೆಲ್ಲಿಸಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಂತಹ ಕೆಲಸವನ್ನು ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದಲ್ಲಿ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದರು.
ದೇಶದ ಯುವಕರು ಉದ್ಯೋಗವಿಲ್ಲದೇ ಹತಾಶರಾಗಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ವಾರ್ಷಿಕ 2 ಕೋಟಿ ಉದ್ಯೋಗವಲ್ಲ, 10 ವರ್ಷಗಳ ಆಡಳಿತದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಎಂಜಿನಿಯರಿಂಗ್ ಮುಗಿಸಿದವರು ನರೇಗಾದಂತಹ ಕೂಲಿ ಕೆಲಸ ಮಾಡಬೇಕಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಪ್ರಧಾನ ಕಾರ್ಯದರ್ಶಿ ಎಂ. ಶಿವಣ್ಣ, ವಕ್ತಾರ ಕೆ. ಮಹೇಶ್, ಸೇವಾದಳದ ಗಿರೀಶ್ ಇದ್ದರು.
ಬಾಕ್ಸ್ ಸುದ್ದಿವಿಮಾನ ನಿಲ್ದಾಣಕ್ಕೆ ನಾಮಕರಣ ವಿಷಯದಲ್ಲಿ ರಾಜಕೀಯಕನ್ನಡಪ್ರಭ ವಾರ್ತೆ ಮೈಸೂರು
ಹುಬ್ಬಳ್ಳಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವಂತೆ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೇ, ಮೈಸೂರಿಗೂ ಸಂಬಂಧ ಇಲ್ಲ. ಟಿಪ್ಪು ಹೆಸರಿಡುವಂತೆ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದರು. ಈ ವಿಚಾರವಾಗಿ ಸಂಸದ ಪ್ರತಾಪಸಿಂಹ ಪತ್ರ ಬರೆದು ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡಿದ್ದಾರೆ.