5 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

KannadaprabhaNewsNetwork |  
Published : Apr 14, 2026, 01:45 AM IST
ಸುದ್ದಿ ಚಿತ್ರ ೧ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ  ಸೋಮವಾರ ಗಿಡ ನೆಡುವ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಟಿ.ಪಿ. ರಾಮಲಿಂಗೇಗೌಡ  ಚಾಲನೆ ನೀಡಿದರು | Kannada Prabha

ಸಾರಾಂಶ

5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಸಾಕ್ಷಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುವ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಸಾಕ್ಷಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅವರು ತಿಳಿಸಿದರು.

ಪರಿಸರ ದಿನಚಾರಣೆಯ ಅಂಗವಾಗಿ 5 ಲಕ್ಷ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ತಾಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆಯ ಆವರಣದಲ್ಲಿ ಸೋಮವಾರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ರಾಜ್ಯದಲ್ಲಿ 5 ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿಯ ಕಾರ್ಯಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಧರೆ ಫೌಂಡೇಶನ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಆ ಮೂಲಕ ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಜವಾಬ್ದಾರಿಯನ್ನು ತೋರುತ್ತಿದೆ. ಕೇವಲ ಗಿಡಗಳನ್ನು ನೆಟ್ಟು ಹೋಗುವುದರಿಂದ ಗಿಡ ಬೆಳೆಯುವುದಿಲ್ಲ, ಅವು ಬೆಳೆಯುವವರೆಗೆ ಕನಿಷ್ಠ 3 ವರ್ಷ ಸಂರಕ್ಷಣೆ ಮಾಡುವ ಅಗತ್ಯವಿದೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಚಿಕ್ಕಬಳ್ಳಾಪುರ ಜಿಲ್ಲೆಗೆ 5 ಲಕ್ಷ ಸಸಿಗಳನ್ನು ಬೆಳೆಸುವ ಗುರಿಯನ್ನು ನೀಡಿದೆ. ಅದರ ಭಾಗವಾಗಿ ಸೋಮವಾರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 400 ಗಿಡಗಳನ್ನು ನೆಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಇವರ ಸಹಕಾರ ಪಡೆದು ಜಿಲ್ಲೆಯಲ್ಲಿ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಆ ಮೂಲಕ ಅಂತರ್ಜಲ ವೃದ್ಧಿಸಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಲಾಗುವುದು. ಈ ಕಾರ್ಯಕ್ಕೆ ಜಿಲ್ಲೆಯ ಸರ್ಕಾರೇತರ ಸಂಸ್ಥೆಗಳು, ಸಮಸ್ತ ಸಾರ್ವಜನಿಕರು, ಸಹಕಾರ ನೀಡಬೇಕು. ಗಿಡ ಬೆಳೆಸುವ ಜವಬ್ದಾರಿಯನ್ನು ಸಾರ್ವಜನಿಕರು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.ಜಿಲ್ಲಾಧಿಕಾರಿ ಜಿ.ಪ್ರಭು ಅವರು ಮಾತನಾಡಿ, ಪ್ರತಿ ವರ್ಷ ಸರಾಸರಿ 3 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯವನ್ನು ಜಿಲ್ಲೆಯಲ್ಲಿ ಮಾಡಲಾಗುತ್ತಿದೆ. ಆ ಕಾರ್ಯಕ್ರಮದ ಜೊತೆಗೆ ಕಾನೂನು ಸೇವಾ ಪ್ರಾಧಿಕಾರದ ಜೊತೆಗೆ ಹೆಚ್ಚುವರಿಯಾಗಿ 5 ಲಕ್ಷ ಸಸಿಗಳನ್ನು ಬೆಳೆಸುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡಲಾಗುವುದು. ನೆಟ್ಟ ಗಿಡಗಳ ಪೈಕಿ ಶೇ. 80 ರಷ್ಟು ಗಿಡಗಳನ್ನು ಉಳಿಸಿ ಬೆಳೆಸಲು ಪ್ರತಿ ತಿಂಗಳಿಗೊಮ್ಮೆ ಎಲ್ಲಾ ನೆಟ್ಟ ಸಸಿಗಳ ಮೌಲ್ಯಮಾಪನ ಮಾಡುವ ಮೂಲಕ ಈ ಮೌಲ್ಯಯುತವಾದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದರು.ಈ ವೇಳೆ ಚಿಕ್ಕಬಳ್ಳಾಪುರ ಹಿರಿಯ ಸಿವಿಲ್ ನ್ಯಾ.ಬಿ.ಶಿಲ್ಪ, ಶಿಡ್ಲಘಟ್ಟ ಹಿರಿಯ ಸಿವಿಲ್ ನ್ಯಾ.ಮೊಹಮ್ಮದ್ ರೋಷನ್ ಷಾ , ಪ್ರಧಾನ ಸಿವಿಲ್ ನ್ಯಾ.ಸಿ.ಎಸ್. ಸುಕನ್ಯಾ , ಹೆಚ್ಚುವರಿ ಸಿವಿಲ್ ನ್ಯಾ.ಎಸ್. ರಂಜಿತಾ , ಚಿಕ್ಕಬಳ್ಳಾಪುರ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಚಿಕ್ಕಬಳ್ಳಾಪುರ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ಶಿಡ್ಲಘಟ್ಟ ತಹಸೀಲ್ದಾರ್ ಗಗನಸಿಂಧೂ, ಚಿಕ್ಕಬಳ್ಳಾಪುರ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಶಿಡ್ಲಘಟ್ಟ ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಸೇರಿದಂತೆ ಇಂದಿರಾ ಗಾಂಧಿ ವಸತಿ ಶಾಲೆಯ ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.

PREV

Recommended Stories

ತಿಳಿದಿದ್ದೂ ಮರೆತಿರಬಹುದಾದ 6 ಬಹುಮುಖ್ಯ ಸಲಹೆ
ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ : ಸಿಎಂ