ಕಾವೇರಿ:ಕರ್ನಾಟಕ ಸೇನಾಪಡೆಯಿಂದ ಮುಂದುವರೆದ ಪ್ರತಿಭಟನೆ

KannadaprabhaNewsNetwork |  
Published : Oct 21, 2023, 12:31 AM IST
ಕಾವೇರಿ :  ಗುದ್ದಲಿ, ಪಿಕಾಸಿ, ಬಾಡ್ಲಿ, ಮಾವಟಿ ಪ್ರದರ್ಶಿಸಿ ವಿನೂತನ ಪ್ರತಿಭಟನೆಕಾವೇರಿ :  ಗುದ್ದಲಿ, ಪಿಕಾಸಿ, ಬಾಡ್ಲಿ, ಮಾವಟಿ ಪ್ರದರ್ಶಿಸಿ ವಿನೂತನ ಪ್ರತಿಭಟನೆಕಾವೇರಿ :  ಗುದ್ದಲಿ, ಪಿಕಾಸಿ, ಬಾಡ್ಲಿ, ಮಾವಟಿ ಪ್ರದರ್ಶಿಸಿ ವಿನೂತನ ಪ್ರತಿಭಟನೆಕಾವೇರಿ : ಗುದ್ದಲಿ, ಪಿಕಾಸಿ, ಬಾಡ್ಲಿ, ಮಾವಟಿ ಪ್ರದರ್ಶಿಸಿ ವಿನೂತನ ಪ್ರತಿಭಟನೆ | Kannada Prabha

ಸಾರಾಂಶ

ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಮಾವಟಿ, ಗುದ್ದಲಿ, ಪಿಕಾಸಿ ಬಾಡ್ಲಿ ಹಿಡಿದು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು

ಗುದ್ದಲಿ, ಪಿಕಾಸಿ, ಮಾವಟಿ, ಬಾಡ್ಲಿ ಪ್ರದರ್ಶಿಸಿ ವಿನೂತನ ಧರಣಿ । ಹೆದ್ದಾರಿ ತಡೆ, ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಮಾವಟಿ, ಗುದ್ದಲಿ, ಪಿಕಾಸಿ ಬಾಡ್ಲಿ ಹಿಡಿದು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ..ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದಿದೆ. ಕಾವೇರಿ ನ್ಯಾಯಾಧೀಕರಣ ತಮಿಳುನಾಡಿನ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ನಮ್ಮ ನೀರಿಗೆ ಅತ್ಯಂತ ತೊಂದರೆ ಉಂಟು ಮಾಡುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸತತವಾಗಿ ಕಳೆದ ೩೭ ದಿನಗಳಿಂದ ವಿನೂತನ ಪ್ರತಿಭಟನೆ ನಡೆಸಿಕೊಂಡು ಬಂದಿದ್ದು, ಇಂದು ಕೂಡ ಗುದ್ದಲಿ, ಬಾಡ್ಲಿ, ಪಿಕಾಸಿ, ಮಾವಟಿ ಪ್ರದರ್ಶಿಸಿ ಕರ್ನಾಟಕದಲ್ಲಿ ನೀರು ಇಲ್ಲ. ಮಳೆ ಇಲ್ಲ, ಬೆಳೆಗಳು ಸಂಪೂರ್ಣ ಒಣಗಿದೆ. ರಾಜ್ಯದ ರೈತರು ಬೇರೆಬೇರೆ ರಾಜ್ಯಗಳಿಗೆ ಗುಳೆ ಹೋಗುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಅಣಕು ಪ್ರತಿಭಟನೆ ಮಾಡಲಾಡಗಿದೆ ಎಂದರು. ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತನ್ನು ತೀಟೆಯನ್ಬು ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು‌ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ನಿಜದ್ವನಿಗೋವಿಂದರಾಜು, ಮಹೇಶ್ ಗೌಡ, ನಂಜುಂಡಶೆಟ್ಟಿ ಗು.ಪುರುಷೋತ್ತಮ್, ತಾಂಡವಮೂರ್ತಿ, ರಾಜಪ್ಪ, ಲಿಂಗರಾಜು, ವೀರಭದ್ರ, ಇತರರು ಭಾಗವಹಿಸಿದ್ದರು. ------------------------- 20ಸಿಎಚ್‌ಎನ್‌13 ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯು ಗುದ್ದಲಿ, ಪಿಕಾಸಿ, ಮಾವಟಿ, ಬಾಡ್ಲಿ ಪ್ರದರ್ಶಿಸಿ ಚಾಮರಾಜನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿತು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ