ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಿ

KannadaprabhaNewsNetwork |  
Published : Nov 25, 2023, 01:15 AM IST
24ಕೆಎಂಎನ್ ಡಿ21ಪಾಂಡವಪುರ ತಾಪಂ ಸಭಾಂಗಣದಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ  ಬರ ಪರಿಹಾರ ಸಮಿತಿ ಹಾಗೂ ಟಾಸ್ಕ್‌ಪೋರ್ಸ್ ಸಭೆ ನಡೆಸಿ ಚರ್ಚಿಸಿದರು. | Kannada Prabha

ಸಾರಾಂಶ

ಪಾಂಡವಪುರ: ಬರದಿಂದ ಸಂಕಷ್ಟದಲ್ಲಿರುವ ರೈತರು, ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬರ ಪರಿಹಾರ ಸಮಿತಿ ಹಾಗೂ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬರದ ಪರಿಸ್ಥಿತಿಯಿಂದ ತಾಲೂಕಿನಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂಧಿಸಬೇಕು. ಕಾಲಮಿತಿಯೊಳಗೆ ಗುಣಮಟ್ಟದಿಂದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನತೆಗೆ ನೆರವಾಗಬೇಕು ಎಂದು ಸೂಚಿಸಿದರು.

ಅಧಿಕಾರಿಗಳಿಗೆ ದರ್ಶನ್ ಪುಟ್ಟಣ್ಣಯ್ಯ ತಾಕೀತು

ಬರದ ಛಾಯೆ ಎದುರಾಗಿರುವುದರಿಂದ ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತಕ್ಷಣವೇ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಿ, ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ ಎಂದು ತಾಕೀತು ಮಾಡಿದರು. ಅಧಿಕಾರಿಗಳು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಸಕಾಲದಲ್ಲಿ ಪಿಂಚಣಿ ತಲುಪುವಂತೆ ಕ್ರಮವಹಿಸಿ ಹೊಸದಾಗಿ ಅರ್ಹರನ್ನು ಗುರುತಿಸಿ ಸೇರ್ಪಡೆ ಮಾಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ತಹಸೀಲ್ದಾರ್ ಶ್ರೇಯಸ್, ತಾಪಂ ಇಓ ಲೋಕೇಶ್‌ಮೂರ್ತಿ ಸೇರಿದಂತೆ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.

------

24ಕೆಎಂಎನ್ ಡಿ21

ಪಾಂಡವಪುರ ತಾಪಂ ಸಭಾಂಗಣದಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬರ ಪರಿಹಾರ ಸಮಿತಿ ಹಾಗೂ ಟಾಸ್ಕ್‌ಪೋರ್ಸ್ ಸಭೆ ನಡೆಸಿ ಚರ್ಚಿಸಿದರು.

PREV

Recommended Stories

ಇರಾನ್‌ ಯುದ್ಧ ನಿಲ್ಲದಿದ್ರೆ ಭಾರತದ ಆರ್ಥಿಕತೆಗೆ ಪೆಟ್ಟು- ಸಂಕಷ್ಟದ ಸ್ಥಿತಿ
ಹೋಳಿ ಹುಣ್ಣಿಮೆಯಂದು ಕೇತುಗ್ರಸ್ತ ರಕ್ತ ಚಂದ್ರಗ್ರಹಣ: ನಗರದ ವಿವಿಧ ದೇಗುಲಗಳಲ್ಲಿ ಶುದ್ಧೀಕರಣ, ವಿಶೇಷ ಪೂಜೆ